ಸಂಬಂಧಿಕರ ಮನೆಗೆಂದು ಶಿಡೇನೂರ ಗ್ರಾಮಕ್ಕೆ ಬಂದಿದ್ದ ಕುಟುಂಬ ಮರಳಿ ಹಾವೇರಿಗೆ ಹೋಗುವಾಗ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಸಂಭವಿಸಿದೆ. ಚಾಲಕ ಧೀರೇಂದ್ರ ಯಾದವ್‌ನನ್ನು ಬ್ಯಾಡಗಿ ಪೊಲೀಸರು ಬಂಧಿಸಿದ್ದಾರೆ. 

ಬ್ಯಾಡಗಿ(ಹಾವೇರಿ)(ಫೆ.28): ಲಾರಿಯೊಂದು ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟು, ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಹೃದಯ ವಿದ್ರಾವಕ ಘಟನೆ ತಾಲೂಕಿನ ಮೊಟೇಬೆನ್ನೂರು ಬಳಿಯಿರುವ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಮಂಗಳವಾರ ಸಂಜೆ ನಡೆದಿದೆ.

ಆಸಿಫ್‌ ಉಲ್ಲಾ (34), ಆತನ ಪತ್ನಿ ಆಫ್ರೀನಾಬಾನು (27), ಪುತ್ರ ಅರ್ಫಾನ್‌ (6) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪುತ್ರಿ ರುಕ್ಸಾರ (3) ತೀವ್ರ ಗಾಯಗೊಂಡಿದ್ದು, ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೈಸ್ ರಸ್ತೆಯಲ್ಲಿ ಭೀಕರ ಅಪಘಾತ; ಲಾರಿ ಚಾಲಕನ ಪಾದವೇ ತುಂಡು!

ಸಂಬಂಧಿಕರ ಮನೆಗೆಂದು ಶಿಡೇನೂರ ಗ್ರಾಮಕ್ಕೆ ಬಂದಿದ್ದ ಕುಟುಂಬ ಮರಳಿ ಹಾವೇರಿಗೆ ಹೋಗುವಾಗ ಬೆಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಸಂಭವಿಸಿದೆ. ಚಾಲಕ ಧೀರೇಂದ್ರ ಯಾದವ್‌ನನ್ನು ಬ್ಯಾಡಗಿ ಪೊಲೀಸರು ಬಂಧಿಸಿದ್ದಾರೆ. ಬ್ಯಾಡಗಿ ಫೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.