ಧಾರವಾಡದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ: 6 ವರ್ಷದ ಮಗು ಸೇರಿ ಮೂವರ ದುರ್ಮರಣ
ಘಟನಾ ಸ್ಥಳಕ್ಕೆ ಸಂಚಾರಿ ಪೋಲಿಸ್ ಠಾಣೆಯ ಸಿಪಿಐ ಶ್ರಿನಿವಾಸ ಮೇಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೋಲಿಸರು ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಧಾರವಾಡ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಧಾರವಾಡ(ಅ.20): ಲಾರಿ ಮತ್ತು ಅಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಆಟೋದಲ್ಲಿದ್ದ ಮೂವರು ಸಾವನ್ನಪ್ಪಿ, ಮೂವರಿಗೆ ಗಂಭಿರವಾದ ಗಾಯಗಳಾದ ಘಟನೆ ಧಾರವಾಡದ ಸಂಪಿಗೆನಗರ ಬಳಿ ಇಂದು(ಭಾನುವಾರ) ಬೆಳಗ್ಗೆ ನಡೆದಿದೆ.
ಆಟೋ ಚಾಲಕ ರಮೇಶ ಹಂಚನಿಮನಿ(35), ಮರೆವ್ವ ಹಂಚಿನಮನಿ(55) ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 6 ವರ್ಷದ ಮಗು ಕೂಡ ಸಾವನ್ನಪ್ಪಿದೆ. ಗಾಯಾಳುಗಳಾದ ರೇಣುಕಾ, ಪ್ರಣವ ಮತ್ತು ಪೃತ್ವಿ ಇಬ್ಬರಿಗೆ ಗಾಯಗಳಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರೆಲ್ಲರೂ ಕೆಲಗೇರಿ ಗ್ರಾಮದವರಾಗಿದ್ದಾರೆ.
ಹುಬ್ಬಳ್ಳಿ: ಸಾವಿನ ಹೆದ್ದಾರಿಯಲ್ಲಿ ಮತ್ತೆರಡು ಜೀವಗಳು ಬಲಿ, ಬೈಕ್‌ಗೆ ಕಾರು ಡಿಕ್ಕಿ ಇಬ್ಬರು ದಂಪತಿ ಸಾವು!
ಘಟನಾ ಸ್ಥಳಕ್ಕೆ ಸಂಚಾರಿ ಪೋಲಿಸ್ ಠಾಣೆಯ ಸಿಪಿಐ ಶ್ರಿನಿವಾಸ ಮೇಟಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಚಾರಿ ಪೋಲಿಸರು ಲಾರಿ ಚಾಲಕನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಧಾರವಾಡ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಬಿಡಾಡಿ ದನಗಳಿಂದ ಅಪಘಾತವಾಗಿದೆ ಎಂದು ಕೆಲಗೇರಿ ಗ್ರಾಮಸ್ಥರು ಆರೋಪಿಸಿದ್ದಾರೆ. ಬಿಡಾಡಿ ದನಗಳನ್ನ ರೋಡಿಗೆ ಬಿಟ್ಟ ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಪೋಲಿಸ್ ಕಮಿಷನರ್ ಬರಬೇಕು ಎಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಅಲ್ಲಲ್ಲಿ ರೋಡ್ ಹಂಪ್‌ಗಳನ್ನ ಹಾಕಬೇಕು ಎಂದು ಕೆಲಗೇರಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.