Asianet Suvarna News Asianet Suvarna News

ತುಮಕೂರು: ಮಧುಗಿರಿ ಬಳಿ ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು

ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಮತ್ತೋರ್ವನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Three Killed due to Truck Car Accident at Madhugiri in Tumakuru grg
Author
First Published Sep 26, 2023, 8:46 AM IST | Last Updated Sep 26, 2023, 9:33 AM IST

ತುಮಕೂರು(ಸೆ.26):  ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿ ಬಳಿ ನಡೆದಿದೆ. ಮೃತರನ್ನ ಆಕಾಶ್(20), ಹೇಮಂತ್(28) ಹಾಗೂ ಶಿವಕುಮಾರ್ ಎಂದು ಗುರುತಿಸಲಾಗಿದೆ. 

ಲಾರಿ ಹಾಗೂ ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಮತ್ತೋರ್ವನನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಭೀಕರ ಅಪಘಾತ: ಮೂವರ ದುರ್ಮರಣ

ಉಜ್ವಲ್ ಕೃಷ್ಣ ಎಂಬಾತನೇ ಅಪಘಾತದಲ್ಲಿ ಗಾಯಗೊಂಡವರಾಗಿದ್ದಾರೆ. ಕಾರು ಬೆಂಗಳೂರಿನಿಂದ ಪಾವಗಡ ಕಡೆ, ಲಾರಿ ಪಾವಗಡದಿಂದ ತುಮಕೂರು ಕಡೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ.  ಮೃತರೆಲ್ಲರೂ ಪಾವಗಡ ಮೂಲದವರು ಎನ್ನಲಾಗಿದೆ. ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. 

Latest Videos
Follow Us:
Download App:
  • android
  • ios