Asianet Suvarna News Asianet Suvarna News

ತುಮಕೂರು: ಕೆರೆಗೆ ಉರುಳಿ ಬಿದ್ದ ಧರ್ಮಸ್ಥಳಕ್ಕೆ ಹೊರಟ್ಟಿದ್ದವರ ಕಾರು, ಸ್ಥಳದಲ್ಲೇ ಮೂವರ ದುರ್ಮರಣ

ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದ ಬಳಿಯಿರುವ ರಾಮಲಿಂಗಪುರ ಕೆರೆಯಲ್ಲಿ ನಡೆದ ಘಟನೆ 

Three Killed For Car overturn in to the Lake in Tumakuru grg
Author
First Published Oct 29, 2023, 8:46 AM IST

ತುಮಕೂರು(ಅ.29): ಕಾರೊಂದು ಪಲ್ಟಿಯಾಗಿ ಕೆರೆಗೆ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣದ ಬಳಿಯಿರುವ ರಾಮಲಿಂಗಪುರ ಕೆರೆಯಲ್ಲಿ ಇಂದು(ಭಾನುವಾರ) ನಡೆದಿದೆ.  ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. 

ಮೃತರನ್ನ ದೊಡ್ಡಣ್ಣ, ಸಣ್ಣಮ್ಮ, ಯಮುನಾ ಎಂದು ಗುರುತಿಸಲಾಗಿದೆ. ಪ್ರವೀಣ್ ಎಂಬುವರೇ ಪ್ರಾಣಪಾಯದಿಂದ ಪಾರಾಗಿದ್ದಾರೆ. ಮೃತರೆಲ್ಲರು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ವೀರಾಪುರ ಗ್ರಾಮದವರಾಗಿದ್ದಾರೆ. 

ಬೆಂಗಳೂರು: ಸರಣಿ ಅಪಘಾತಕ್ಕೆ ತಾಯಿ-ಮಗು ಬಲಿ, ನಾಲ್ವರಿಗೆ ಗಾಯ

ಇಂದು ಬೆಳಗ್ಗಿನ ಜಾವ ಮಾರುತಿ ಆಲ್ಟೋ ಕಾರಿನಲ್ಲಿ ವೀರಾಪುರದಿಂದ ಧರ್ಮಸ್ಥಳಕ್ಕೆ ಹೊರಟ್ಟಿದ್ದರು ಎನ್ನಲಾಗ್ತಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ನುಗ್ಗಿದ ಪರಿಣಾಮ ದುರ್ಘಟನೆ ಸಂಭವಿಸಿದೆ.  ಘಟನಾ ಸ್ಥಳಕ್ಕೆ ಶಿರಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios