Asianet Suvarna News Asianet Suvarna News

ಚಿತ್ರದುರ್ಗ: ಕಾರು, ಲಾರಿ ಮಧ್ಯೆ ಅಪಘಾತ, ನಾಲ್ವರು ಸಾವು

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇನ್ನುಳಿದ ಐವರಿಗೆ  ಗಂಭೀರವಾದ ಗಾಯಗಳಾಗಿದ್ದು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Three Killed in Car Truck Accident in Chitradurga grg
Author
First Published Jun 15, 2024, 9:15 AM IST

ಚಿತ್ರದುರ್ಗ(ಜೂ.15):  ಕಾರು, ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿ ಐವರು ಗಂಭೀರವಾದ ಗಾಯಗಳಾದ ಘಟನೆ ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಇಂದು(ಶನಿವಾರ) ನಡೆದಿದೆ. 

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇನ್ನುಳಿದ ಐವರಿಗೆ  ಗಂಭೀರವಾದ ಗಾಯಗಳಾಗಿದ್ದು ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 
ಇಬ್ಬರು ಮಹಿಳೆಯರು, ಓರ್ವ ಮಗು ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ಸಂಭವಿಸಿದೆ. ಮೃತರರನ್ನ ಪ್ರಜ್ವಲ್ ರೆಡ್ಡಿ(30), ಹರ್ಷಿತಾ(28), ಮೋಹನ್ (2) ಹಾಗೂ ವಿಜಯರೆಡ್ಡಿ ಸಾವು ಎಂದು ಗುರುತಿಸಲಾಗಿದೆ. ಮೃತರು ಬೆಂಗಳೂರಿನ ತಣಸಂದ್ರ ಮೂಲದವರು ಎಂದು ತಿಳಿದು ಬಂದಿದೆ. 

ಬೆಂಗಳೂರು-ಮೈಸೂರು ಎಕ್ಸಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಆಂಧ್ರ ಮೂಲದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಾರಲ್ಲಿದ್ದ ಇನ್ನುಳಿದವರಿಗೆ ಗಂಭೀರವಾದ ಗಾಯಗಳಾಗಿದ್ದು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. 

Latest Videos
Follow Us:
Download App:
  • android
  • ios