* ಮೃತರು ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮುಗಳಖೋಡ್ ಗ್ರಾಮದವರು* ಆಂಧ್ರ ಪ್ರದೇಶದ ನೆಲ್ಲೂರು ಬಳಿ ನಡೆದ ಘಟನೆ* ನಾಲ್ವರ ಸ್ಥಿತಿ ಚಿಂತಾಜನಕ
ಬಾಗಲಕೋಟೆ(ಆ.08): ಲಾರಿ ಮತ್ತು ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಮದುವೆಯಾದ 23ನೇ ದಿನಕ್ಕೆ ನವ ದಂಪತಿ ದುರಂತ ಸಾವು ಕಂಡ ಘಟನೆ ಆಂಧ್ರ ಪ್ರದೇಶದ ನೆಲ್ಲೂರು ಬಳಿ ಇಂದು(ಭಾನುವಾರ) ನಡೆದಿದೆ. ಈ ಅಪಘಾತದಲ್ಲಿ ಮೂವರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
Add Asianetnews Kannada as a Preferred Source

ಸದ್ದಾಂ ಜಾತಗಾರ್(27),ಪತ್ನಿ ಸಲೀಮಾ(25),ಅತ್ತಿಗೆ ರೇಷ್ಮಾ(26) ಮೃತ ದುರ್ದೈವಿಗಳಾಗಿದ್ದಾರೆ.ಮೃತರು ಬಾಗಲಕೋಟೆ ಮುಧೋಳ ತಾಲೂಕಿನ ಮುಗಳಖೋಡ್ ಗ್ರಾಮದವರು ಎಂದು ತಿಳಿದು ಬಂದಿದೆ. ಮದುವೆಯಾದ ಹೊಸದರಲ್ಲಿ ಸಂಬಂಧಿಕರ ಊರಿಗೆ ಹೋದ ನವ ದಂಪತಿ ಸೇರಿ ಮಸಣ ಸೇರಿದ್ದಾರೆ.
ಹುಬ್ಬಳ್ಳಿಯಲ್ಲಿ ಪ್ರತ್ಯೇಕ ಅಪಘಾತ: ಮೂವರ ದುರ್ಮರಣ
ಕಡಪಗೆ ಸಂಬಂಧಿಕರ ಊರಿನಿಂದ ವಾಪಸ್ಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಕಾರ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
