ರಾಮನಗರ: ಕೆರೆಯಲ್ಲಿ ಈಜಲು ಹೋಗಿದ್ದ ಮೂವರು MBBS ವಿದ್ಯಾರ್ಥಿಗಳು ನಾಪತ್ತೆ

ರಾಮನಗರ ಜಿಲ್ಲೆಯ ಕನಕಪುರದ ಮಾವತ್ತೂರು ಕೆರೆಯಲ್ಲಿ ನಡೆದ ಘಟನೆ 

Three MBBS Students Who Gone Swimming in the Lake Went Missing in Ramanagara grg

ರಾಮನಗರ(ಸೆ.13):  ಈಜಲು ಹೋಗಿದ್ದ ಮೂವರು ಮೆಡಿಕಲ್ ವಿದ್ಯಾರ್ಥಿಗಳು ನಾಪತ್ತೆಯಾದ ಘಟನೆ ರಾಮನಗರ ಜಿಲ್ಲೆಯ ಕನಕಪುರದ ಮಾವತ್ತೂರು ಕೆರೆಯಲ್ಲಿ ಇಂದು(ಮಂಗಳವಾರ) ನಡೆದಿದೆ. ಸಚಿನ್ (26),ಜಾವೀದ್ ಅಹಮದ್ ಮುಲ್ಲಾ(26), ನಿರಂಜನ್(26) ಎಂಬುವರೇ ನಾಪತ್ತೆಯಾದವರು. ಮೂವರು ವಿದ್ಯಾರ್ಥಿಗಳು ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ.

ನಾಪತ್ತೆಯಾದ ಮೂವರು ದಯಾನಂದ ಸಾಗರ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ ಅಂತ ತಿಳಿದು ಬಂದಿದೆ. ನಿನ್ನೆ(ಸೋಮವಾರ) ಮಧ್ಯಾಹ್ನ ಕಾಲೇಜಿನಿಂದ ವಿದ್ಯಾರ್ಥಿಗಳು ಹೊರಹೋಗಿದ್ದರು. 

ಮೋಜು ಮಸ್ತಿಗಾಗಿ ಸಾಲ: ಸಾಲ ತೀರಿಸಲು ಮಹಿಳೆ ಹತ್ಯೆ: ಬಾಲಪರಾಧಿ ಸೇರಿ ಮೂವರ ಬಂಧನ

ಮಾವತ್ತೂರು ಕೆರೆ ಬಳಿ ಬೈಕ್ ಪತ್ತೆಯಾಗಿದ್ದು, ನಾಪತ್ತೆಯಾದ ವಿದ್ಯಾರ್ಥಿಗಳಿಗಾಗಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಸಂಬಂಧ ಕನಕಪುರ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 
 

Latest Videos
Follow Us:
Download App:
  • android
  • ios