ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕಲಬುರಗಿ ಜಿಲ್ಲೆಯಲ್ಲಿ ಸಂಭವಿಸಿದೆ.
ಕಲಬುರಗಿ, [ಜೂ.19]: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾಗಿರುವ ಘಟನೆ ಬುಧವಾರ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಾಗಣಗೇರಾ ಕ್ರಾಸ್ ಬಳಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ರಾಮನಗೌಡ (24) ಹಾಗೂ ಶಾಂತಗೌಡ (24) ಸೇರಿದಂತೆ ಮತ್ತೊರ್ವ ಮೃತಪಟ್ಟಿದ್ದಾನೆ. ಮೃತರಲ್ಲಿ ಇಬ್ಬರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಗ್ರಾಮದವರು ಎಂದು ತಿಳಿದುಬಂದಿದ್ದು, ಮತ್ತೋರ್ವ ಸುರಪುರ ತಾಲೂಕಿನವ ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ಯಡ್ರಾಮಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
