ಯಲಬುರ್ಗಾ(ಅ.03): ಟಾಟಾ ಏಸ್‌ ವಾಹನ ಮತ್ತು ಬೈಕ್‌ ಮುಖಾಮುಖಿ ಡಿಕ್ಕಿ ಹೊಡೆದು ಬೈಕ್‌ನಲ್ಲಿದ್ದ ಮೂವರು ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದ ಹತ್ತಿರ ನಿನ್ನೆ(ಶುಕ್ರವಾರ) ನಡೆದಿದೆ.

ಅಪಘಾತದಲ್ಲಿ ಗಾಯಗೊಂಡ ಮೂವರನ್ನು ಯಲಬುರ್ಗಾ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ವಿಜಯಪುರದ ಬಳಿ ಭೀಕರ ಅಪಘಾತ: ಅಂಜನಾದ್ರಿ ಬೆಟ್ಟಕ್ಕೆ ಹೊರಟ್ಟಿದ್ದ ಮೂವರು ಭಕ್ತರ ದುರ್ಮರಣ

ಮೃತರನ್ನು ಬೈರಾಪುರ ಗ್ರಾಮದ ಈರಣ್ಣ ಸಿಂಧೋಗಿ (26), ಚಿಕ್ಕಮ್ಯಾಗೇರಿ ಗ್ರಾಮದ ಹನುಮಪ್ಪ ಉಪ್ಪಾರ (26), ಧರ್ಮಪ್ಪ ಹೊಸಳ್ಳಿ (55) ಎಂದು ಗುರುತಿಸಲಾಗಿದೆ. ಈ ಕುರಿತು ಯಲಬುರ್ಗಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.