ಹಾಸನ(ಸೆ.03): ಪ್ರವಾಸೋದ್ಯಮ ದೃಷ್ಟಿಯಿಂದ ಮಹತ್ವದ ಜಿಲ್ಲೆಯಾಗಿರುವ ಹಾಸನದಲ್ಲಿ ಸ್ಟಾರ್ ಹೊಟೇಲ್ ನಿರ್ಮಾಣ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿಟಿ ರವಿ ಹೇಳಿದ್ದಾರೆ.

ಹಾಸನದಲ್ಲಿ ಇಂದು (ಮಂಗಳವಾರ) ಮಾತನಾಡಿದ ಅವರು, ಯಗಚಿಯಲ್ಲಿ 20 ಕೋಟಿ‌ ವೆಚ್ಚದಲ್ಲಿ ಹೋಟೆಲ್ ನಿರ್ಮಿಸಲಾಗುತ್ತದೆ ಎಂದಿದ್ದಾರೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಸಾಕಷ್ಟು ಅನುದಾನ ಬಿಡುಗಡೆ ಮಾಡಲಾಗಿದೆ. ಯಗಚಿಯಲ್ಲಿ 20 ಕೋಟಿ‌ ವೆಚ್ಚದಲ್ಲಿ ತ್ರೀ ಸ್ಟಾರ್ ಹೋಟೆಲ್ ನಿರ್ಮಾಣ ಮಾಡಲಾಗುವುದು. ಪ್ರಧಾನಿಯವರು ಹೇಳಿದಂತೆ ರಾಜ್ಯದ ಹಲವು ಪ್ರದೇಶಗಳನ್ನು ಜಾಗತಿಕ ಪ್ರವಾಸಿ ಕೇಂದ್ರ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಐಟಿ, ಇಡಿ ದುರುಪಯೋಗ: ಕಾಂಗ್ರೆಸ್‌ಗೆ ಕಾರಜೋಳ ಟಾಂಗ್

ಪ್ರತಿ ರಾಜ್ಯದಲ್ಲಿಯೂ ಜಗತ್ತಿನ ಗಮನ‌ಸೆಳೆಯುವಂತಹ ಪ್ರವಾಸಿ ಕೇಂದ್ರಗಳನ್ನು ಗುರುತಿಸಿ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪ್ರವಾಸೋದ್ಯಮದಿಂದ ಹಲವು ಉದ್ಯೋಗಗಳು ಸೃಷ್ಟಿಯಾಗುತ್ತದೆ. ಸಮಗ್ರವಾದ ಮಾಹಿತಿಯನ್ನು ಸರ್ಕಾರ ಸಂಗ್ರಹಿಸುತ್ತದೆ. ಅಭಿವೃದ್ಧಿಯ ನೀಲಿ ನಕ್ಷೆ ತಯಾರಿಸಿ ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು.ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.

ವಿಜಯಪುರ: ನೆರೆ ಪರಿಹಾರದ ಚೆಕ್ ವಾಪಸ್ ಕೊಟ್ಟ ಬ್ಯಾಂಕ್‌