ಹೊನ್ನಾವರ: ಸಾರಿಗೆ ಬಸ್‌- ಬೈಕ್‌ ಮಧ್ಯೆ ಅಪಘಾತ, ಮೂವರು ಯುವಕರ ದುರ್ಮರಣ

ವಿಜಯಪುರದಿಂದ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೊನ್ನಾವರದ ಶರಾವತಿ ಸೇತುವೆ ಮೇಲೆ ಸಾಗುತ್ತಿರುವಾಗ ಮಂಕಿ ಕಡೆಯಿಂದ ಹೊನ್ನಾವರ ಕಡೆಗೆ ಎದುರಿನಿಂದ ಬಂದ ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

Three Youths Killed due to KSRTC Bus Bike Accident at Honnavar in Uttara Kannada grg

ಹೊನ್ನಾವರ(ಜ.01):  ಸಾರಿಗೆ ಸಂಸ್ಥೆಯ ಬಸ್ ಮತ್ತು ಬೈಕ್ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನದಲ್ಲಿದ್ದ ಮೂವರು ಸವಾರರು ಸಾವಿಗೀಡಾದ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶರಾವತಿ ಸೇತುವೆ ಮೇಲೆ ಮಂಗಳವಾರ ಬೆಳಗಿನ ಜಾವ ನಡೆದಿದೆ. 

ತಾಲೂಕಿನ ಮಾವಿನಕುರ್ವಾದ ರಾಘವೇಂದ್ರ ಸೋಮಯ್ಯ ಗೌಡ (34), ಖರ್ವಾ ನಾಥಗೇರಿಯ ರಮೇಶ ರಾಮಚಂದ್ರ ನಾಯ್ಕ (22), ಸಂಶಿ- ಕುದ್ರಿಗಿಯ ಗೌರೀಶ (ಗಣಪತಿ) ಮಂಜುನಾಥ ನಾಯ್ಕ (22) ಮೃತಪಟ್ಟ ವ್ಯಕ್ತಿಗಳು. 
ವಿಜಯಪುರದಿಂದ ಮಂಗಳೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹೊನ್ನಾವರದ ಶರಾವತಿ ಸೇತುವೆ ಮೇಲೆ ಸಾಗುತ್ತಿರುವಾಗ ಮಂಕಿ ಕಡೆಯಿಂದ ಹೊನ್ನಾವರ ಕಡೆಗೆ ಎದುರಿನಿಂದ ಬಂದ ಬೈಕ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರರಾದ ರಾಘವೇಂದ್ರ ಗೌಡ ಮತ್ತು ರಮೇಶ ನಾಯ್ಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗೌರೀಶ(ಗಣಪತಿ) ನಾಯ್ಕ ಅವರು ಹೊನ್ನಾವರದ ಸರ್ಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಹೊನ್ನಾವರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್‌ಐ ಮಮತಾ ನಾಯ್ಕ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

ಅಪ್ಪನ ₹30 ಲಕ್ಷ ಇನ್ಸೂರೆನ್ಸ್​​​​ ಹಣಕ್ಕಾಗಿ ಮಗ ಮಾಡಿದ್ದು ಆಕ್ಸಿಡೆಂಟ್ ಪ್ಲಾನ್!

ಮುಗಿಲು ಮುಟ್ಟಿದ ಆಕ್ರಂದನ:

ಮೃತಪಟ್ಟವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆಸ್ಪತ್ರೆಯ ಮುಂದೆ ಜಮಾಯಿಸಿದ ಕುಟುಂಬದ ಸದಸ್ಯರು, ಸ್ನೇಹಿತರು ಕಣ್ಣೀರಿಟ್ಟರು. ಮೃತಪಟ್ಟ ಮೂವರಲ್ಲಿ ರಾಘವೇಂದ್ರ ಎಂಬವರು ವಿವಾಹಿತರು. ಇವರು ವೃತ್ತಿಯಲ್ಲಿ ಚಾಲಕರಾಗಿದ್ದರು. 

ಇನ್ನಿಬ್ಬರು ಅವಿವಾಹಿತರು. ನಾಥಗೇರಿಯ ರಮೇಶ, ಸಂಶಿಯ ಗೌರೀಶ ಇಬ್ಬರು ಕಾಲೇಜು ಶಿಕ್ಷಣ ಪೂರೈಸಿ ಉದ್ಯೋಗ ಹೊಂದಬೇಕೆಂದಿದ್ದರು. ರಮೇಶ ಎಂಬವರು ಸೇನೆಯಲ್ಲಿ ಅಥವಾ ಸರ್ಕಾರಿ ಸೇವೆ ಸಲ್ಲಿಸಬೇಕೆಂದು ಕನಸು ಕಂಡಿದ್ದರು. ಇದಕ್ಕಾಗಿ ಅಂಕೋಲಾದಲ್ಲಿ ತರಬೇತಿ ಪಡೆಯುತ್ತಿದ್ದರು. ಇವರ ತಂದೆ-ತಾಯಿಗಳು ಕೂಲಿ ಕೆಲಸ ಮಾಡಿಕೊಂಡಿದ್ದರು. ಇನ್ನು ಗೌರೀಶ ಅವರ ಕೌಟುಂಬಿಕ ಪರಿಸ್ಥಿತಿ ಕರುಣಾಜನಕವಾಗಿದೆ. ತಾಯಿ ಮಗ ಇಬ್ಬರೇ ಇದ್ದರು. ಮನೆಯ ಸಂಪೂರ್ಣ ಜವಾಬ್ದಾರಿ ಗೌರೀಶ ಅವರ ಮೇಲಿತ್ತು.

Latest Videos
Follow Us:
Download App:
  • android
  • ios