Asianet Suvarna News Asianet Suvarna News

ಮಂಗಳೂರು ಗೋಲಿಬಾರ್‌: ಬೆದರಿಕೆ ಕರೆಯ ಮಾಹಿತಿ ನೀಡಿದ ಖಾಝಿ

ಮಂಗಳೂರು ಖಾಝಿ ತ್ವಾಕಾ ಅಹ್ಮದ್‌ ಮುಸ್ಲಿಯಾರ್‌ ಅವರು ಜೀವ ಬೆದರಿಕೆ ಕರೆ ಬಂದ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ತನಿಖೆ 12ರಂದು ನಡೆಯಲಿದೆ ಎಂದು ತನಿಖಾಧಿಕಾರಿಯಾಗಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ತಿಳಿಸಿದ್ದಾರೆ.

 

Thwaka Ahmed Musliyar gives information about death threat
Author
Bangalore, First Published Mar 10, 2020, 12:17 PM IST

ಮಂಗ​ಳೂ​ರು(ಮಾ.10): ಮಂಗಳೂರು ಗೋಲಿಬಾರ್‌ ಘಟನೆಗೆ ಸಂಬಂಧಿಸಿ ನಡೆಯುತ್ತಿರುವ ಮ್ಯಾಜಿಸ್ಟ್ರೀರಿಯಲ್‌ ವಿಚಾರಣೆ ವೇಳೆ ಸೋಮವಾರ ಡಿಸಿಪಿ ಅರುಣಾಂಗ್ಶು ಗಿರಿ ಅವರು 38 ಸಾಕ್ಷ್ಯಗಳನ್ನು ಪೊಲೀಸರು ತನಿಖಾಧಿಕಾರಿ ಮುಂದೆ ಸಲ್ಲಿಸಿದ್ದಾರೆ.

ಇದೇ ವೇಳೆ ಮಂಗಳೂರು ಖಾಝಿ ತ್ವಾಕಾ ಅಹ್ಮದ್‌ ಮುಸ್ಲಿಯಾರ್‌ ಅವರು ಜೀವ ಬೆದರಿಕೆ ಕರೆ ಬಂದ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ತನಿಖೆ 12ರಂದು ನಡೆಯಲಿದೆ ಎಂದು ತನಿಖಾಧಿಕಾರಿಯಾಗಿರುವ ಉಡುಪಿ ಜಿಲ್ಲಾಧಿಕಾರಿ ಜಗದೀಶ್‌ ತಿಳಿಸಿದ್ದಾರೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ವಿಶ್ವಮಟ್ಟದ ಪ್ರಶಸ್ತಿ

ನಗರದ ಹಂಪನಕಟ್ಟೆಯಲ್ಲಿರುವ ಮಿನಿ ವಿಧಾನಸೌಧದ ಉಪ ವಿಭಾಗಾಧಿಕಾರಿ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ವಿಚಾರಣೆ ನಡೆಯಿತು. ವಿಚಾರಣಾಧಿಕಾರಿ ಎದುರು ಹಾಜರಾದ ಐಪಿಎಸ್‌ ಅಧಿಕಾರಿ ಅರುಣಾಂಗ್ಷು ಗಿರಿ ಅವರು ಲಿಖಿತ ಹೇಳಿಕೆ ಮತ್ತು ದಾಖಲೆಗಳನ್ನು ಸಲ್ಲಿಸಿದರು.

ಡಿ.19ರಂದು ತಾನು ಪೊಲೀಸ್‌ ಸಿಬ್ಬಂದಿಯೊಂದಿಗೆ ಕರ್ತವ್ಯದಲ್ಲಿದ್ದೆ. ಅನುಮತಿ ಇಲ್ಲದೆ ಪ್ರತಿಭಟನೆಗೆ ಯತ್ನಿಸಿದ ಜನರನ್ನು ನಿಯಂತ್ರಿಸುವ ಕೆಲಸ ಮಾಡುತ್ತಿದ್ದೆವು. ಪ್ರತಿಭಟನೆಗೆ ಸೇರಿದ್ದ ಜನರು ಗಲಭೆಗೆ ಇಳಿದರು. ಮಾರಕಾಸ್ತ್ರಗಳೊಂದಿಗೆ ಪೊಲೀಸರ ಮೇಲೆ ದಾಳಿ ನಡೆಸಿದರು. 78 ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ಗಾಯಗೊಂಡರು. ಪರಿಸ್ಥಿತಿ ನಿಯಂತ್ರಿಸಲು ಅನಿವಾರ್ಯವಾಗಿ ಗುಂಡು ಹಾರಿಸಬೇಕಾಯಿತು ಎಂದು ಡಿಸಿಪಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಖಾಝಿ ಹೇಳಿಕೆ ದಾಖಲು:

ವಿಚಾರಣಾಧಿಕಾರಿ ಎದುರು ಹಾಜರಾದ ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹಮ್ಮದ್‌ ಮುಸ್ಲಿಯಾರ್‌ ಅವರು ಘಟನೆಗೆ ಸಂಬಂಧಿಸಿದಂತೆ ಲಿಖಿತ ಹೇಳಿಕೆ ಸಲ್ಲಿಸಿದರು. ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಸಮಸ್ತ ಕೇರಳ ಸುನ್ನಿ ಸ್ಟೂಡೆಂಟ್‌ ಫೆಡರೇಶನ್‌ (ಎಸ್‌ ಕೆಎಸ್‌ಎಸ್‌ಎಫ್‌) ವತಿಯಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಆದರೆ, ಪೊಲೀಸರು ಅನುಮತಿ ನಿರಾಕರಿಸಿದ ಬಳಿಕ ಪ್ರತಿಭಟನೆಯನ್ನು ವಾಪಸ್‌ ಪಡೆಯಲಾಗಿತ್ತು. ಈ ಸಂಬಂಧ ಸಾರ್ವಜನಿಕರಿಗೆ ಮಾಹಿತಿಯನ್ನೂ ನೀಡಲಾಗಿತ್ತು. ಡಿ.19ರ ಗಲಭೆಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ಖಾಝಿ ಹೇಳಿರುವುದಾಗಿ ಗೊತ್ತಾಗಿದೆ.

ತುಂಬೆ ಡ್ಯಾಂನಲ್ಲಿ 7 ಮೀಟರ್‌ ನೀರು ಸಂಗ್ರಹ ಸಾಧ್ಯ

ಗಲಭೆಯ ಬಳಿಕ ಕೆಲವರು ನನ್ನನ್ನು ದ್ವೇಷಿಸುತ್ತಿದ್ದಾರೆ. ನನ್ನ ಕೊಲೆಗೂ ಯತ್ನಗಳು ನಡೆದಿವೆ. ಈ ಬಗ್ಗೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ ಎಂದು ವಿಚಾರಣಾಧಿಕಾರಿ ಎದುರು ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಿಚಾರಣಾ ಕಲಾಪ ಮುಗಿದ ಬಳಿಕ ಸುದ್ದಿಗಾರರಲ್ಲಿ ಮಾತನಾಡಿದ ಡಿಸಿ ಜಗದೀಶ್‌, 30 ಮಂದಿ ಪೊಲೀಸ್‌ ಅಧಿಕಾರಿಗಳು ಮತ್ತು ಸಿಬ್ಬಂದಿ ವಿಚಾರಣೆಗೆ ಹಾಜರಾಗಿದ್ದರು. ಮಾಚ್‌ರ್‍ 12ರಂದು ಮತ್ತೆ ವಿಚಾರಣೆ ನಡೆಯಲಿದೆ. ಆ ದಿನ ಪೊಲೀಸ್‌ ಕಮಿಷನರ್‌ ಸೇರಿದಂತೆ ಹಲವರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದರು.

Follow Us:
Download App:
  • android
  • ios