ಗುಂಡ್ಲುಪೇಟೆ(ಸೆ.19): ಕಾಡಾನೆಗಳ ಕಾದಾಟದಲ್ಲಿ ಗಾಯಗೊಂಡಿದ್ದ ಗಂಡಾನೆ ಮರಿಯೊಂದನ್ನು ಹುಲಿ ಸಾಯಿಸಿ ತಿಂದು ಹಾಕಿರುವ ಘಟನೆ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಬೆಳಕಿಗೆ ಬಂದಿದೆ.

ಬಂಡೀಪುರ ಹುಲಿ ಯೋಜನೆಯ ಕುಂದಕೆರೆ ವಲಯದ ಲೊಕ್ಕೆರೆ ಬೀಟ್‌ನಲ್ಲಿ ಆನೆ ಮರಿಯ ಕಳೆಬರ ಗಸ್ತಿನಲ್ಲಿದ್ದ ಸಿಬ್ಬಂದಿಗೆ ಕಾಣಿಸಿದಾಗ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸುಮಾರು 5 ರಿಂದ 6 ವರ್ಷದ ಗಂಡಾನೆ ಮರಿಯೊಂದಿಗೆ ಮತ್ತೊಂದು ಕಾಡಾನೆ ಕಾದಾಟ ನಡೆಸಿವೆ ಎನ್ನಲಾಗಿದ್ದು, ಗಾಯಗೊಂಡಿದ್ದ ಆನೆಮರಿಯನ್ನು ಹುಲಿ ತಿಂದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ.

ಗುಂಡ್ಲುಪೇಟೆಯಲ್ಲಿ ನರಭಕ್ಷಕ ಹುಲಿ ಸೆರೆಗೆ ಆಪರೇಷನ್ ಸ್ಟಾರ್ಟ್

ವಿಷಯ ತಿಳಿದು ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಟಿ.ಬಾಲಚಂದ್ರ, ಸಹಾಯಕ ಸಂರಕ್ಷಣಾಧಿಕಾರಿ ಕೆ.ಪರಮೇಶ್‌, ವಲಯ ಅರಣ್ಯಾಧಿಕಾರಿ ಶ್ರೀನಿವಾಸನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಾಫಿ ತೋಟದಲ್ಲಿ ಆನೆಗಳ ಪಿಕ್ನಿಕ್!

"