ತುಮಕೂರು (ಸೆ.14) :  ಕಳೆದ ವಿಧಾನಸಭಾ ಚುನಾವಣೆ ವೇಳೆ ತಿಪಟೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದ ಲೋಕೇಶ್ವರ್ ಇದೀಗ ಜೆಡಿಎಸ್ ತೊರೆಯುವ ಸೂಚನೆ ನೀಡಿದ್ದಾರೆ.

ಇದೀಗ ಜಿ.ಟಿ.ದೇವೇಗೌಡ, ಗುಬ್ಬಿ ಶ್ರೀನಿವಾಸ್ ಬಳಿಕ ಇದೀಗ ಜೆಡಿಎಸ್ ಪಕ್ಷ ಬಿಡುವ ವದಂತಿ ಬೆನ್ನಲ್ಲೇ ಮತ್ತೊಂದು ವಿಕೆಟ್ ಪತನವಾಗುವ ಸೂಚನೆ ದೊರೆತಂತಾಗಿದೆ.

ಪೊಲೀಸ್ ಕಮಿಷನರ್ ಆಗಿದ್ದ ಲೋಕೇಶ್ವರ್ ಜೆಡಿಎಸ್ ಸೇರ್ಪಡೆಯಾಗಿದ್ದರು. ಆದರೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಜೊತೆಗೂ ನಿಕಟ ಸಂಪರ್ಕದಲ್ಲಿರುವ ಲೋಕೇಶ್ವರ್ ಶೀಘ್ರ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಈಗಾಲೇ ತಮ್ಮ ಅಭಿಮಾನಿಗಳ ಜೊತೆಗೆ ಸಭೆ ನಡೆಸಿ ಗಟ್ಟಿ ನಿರ್ಧಾರ ಮಾಡಿದ್ದು,  ಈ ನಿಟ್ಟಿನಲ್ಲಿ ತುಮಕೂರು ಜಿಲ್ಲೆಯಲ್ಲಿ ಜೆಡಿಎಸ್ ಗೆ ಹಿನ್ನಡೆ ಉಂಟಾಗುತ್ತಿರುವ ಸೂಚನೆ ಇದಾಗಿದೆ.