ಟೋಲ್‌ ಸಂಗ್ರಹಿಸುವವರು ನಾವಲ್ಲ, ಹೆದ್ದಾರಿ ಪ್ರಾಧಿಕಾರದವರು: ಸಿದ್ದರಾಮಯ್ಯ

ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿಲ್ಲ. ಕೆಲವೊಂದು ಸೌಲಭ್ಯಗಳ ಕೊರತೆ ಇದೆ. ಇನ್ನಷ್ಟುಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

Toll collectors are not us highway authorities Says CM Siddaramaiah gvd

ಮಂಡ್ಯ (ಜು.30): ಬೆಂಗಳೂರು-ಮೈಸೂರು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿಲ್ಲ. ಕೆಲವೊಂದು ಸೌಲಭ್ಯಗಳ ಕೊರತೆ ಇದೆ. ಇನ್ನಷ್ಟುಹೆಚ್ಚಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ನಗರದ ಹೊರವಲಯದ ಶಶಿಕಿರಣ ಕನ್ವೆನ್‌ನ್ಷನ್‌ ಹಾಲ್‌ ಬಳಿ ಆಳವಡಿಸಿರುವ ಸ್ಪೀಡ್‌ ಡಿಟೆಕ್ಟರ್‌ ಡೆಮೋ ವೀಕ್ಷಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಹೆದ್ದಾರಿ ಕಾಮಗಾರಿ ಅವೈಜ್ಞಾನಿಕತೆಯಿಂದ ಕೂಡಿಲ್ಲ. ಆತುರಾತುರವಾಗಿ ಕೆಲಸ ಮಾಡಿದ್ದಾರೆ. ಸವೀರ್‍ಸ್‌ ರಸ್ತೆಗಳನ್ನು ಅಭಿವೃದ್ಧಿ ಪಡಿಸಿಲ್ಲ. ಬೈಪಾಸ್‌ ರಸ್ತೆಗಳನ್ನು ಬಲವರ್ಧನೆಗೊಳಿಸಬೇಕಿತ್ತು. ಇನ್ನು ಹಲವು ಸೌಕರ್ಯಗಳನ್ನು ಕಲ್ಪಿಸಿಕೊಡುವಲ್ಲಿ ಎಡವಿದ್ದಾರೆ ಎಂದು ತಿಳಿಸಿದರು.

151 ಕೋಟಿ ರು.ಗೆ ಪ್ರಸ್ತಾವನೆ: ಹೆದ್ದಾರಿಯಲ್ಲಿ ರಾಮನಗರ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದವರೆಗೆ ಸವೀರ್‍ಸ್‌ ರಸ್ತೆ ಅಭಿವೃದ್ಧಿಪಡಿಸುವುದು, ಬೈಪಾಸ್‌ ರಸ್ತೆಗಳನ್ನು ಬಲವರ್ಧನೆಗೊಳಿಸುವುದಕ್ಕಾಗಿ 151 ಕೋಟಿ ರು.ಗಳ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿದೆ. ಆಗಸ್ಟ್‌-ನವೆಂಬರ್‌ ವೇಳೆಗೆ ಅನುಮತಿ ದೊರಕಲಿದ್ದು, ನಂತರ ಕಾಮಗಾರಿಗಳು ಆರಂಭವಾಗಲಿವೆ ಎಂದರು. ಟೋಲ್‌ ಸಂಗ್ರಹಿಸುವವರು ನಾವಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಸಂಗ್ರಹ ಮಾಡುತ್ತಾರೆ. ಹೆದ್ದಾರಿ ಸಮಸ್ಯೆ ನಿವಾರಣೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ದೆಹಲಿಗೆ ತೆರಳಲಿದ್ದೇನೆ. ಅಲ್ಲಿ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ, ರಾಷ್ಟ್ರೀಯ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಿದ್ದೇನೆ ಎಂದರು.

ಹವಾಮಾನ ಆಧಾರಿತ ಬೆಳೆ ಬಗ್ಗೆ ಜಾಗೃತಿ ಮೂಡಿಸಿ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ

ಜುಲೈನಲ್ಲಿ ಅಪಘಾತಗಳ ಸಂಖ್ಯೆ ಕ್ಷೀಣ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಆರಂಭವಾದಾಗ ಸ್ಪೀಡ್‌ ಡಿಟೆಕ್ಟರ್‌ ಅಳವಡಿಸಿರಲಿಲ್ಲ. ಅತಿ ವೇಗವಾಗಿ ವಾಹನಗಳು ಸಂಚರಿಸಿದ್ದರಿಂದ ವಾಹನಗಳ ಅಪಘಾತ ಹೆಚ್ಚಾಗಿತ್ತು. ಜೂನ್‌ ತಿಂಗಳಲ್ಲಿ 20 ಅಪಘಾತಗಳು ಸಂಭವಿಸಿದ್ದರೆ, ಜುಲೈ ತಿಂಗಳಲ್ಲಿ ಕೇವಲ 5 ಅಪಘಾತಗಳು ಸಂಭವಿಸಿವೆ. ಅಪಘಾತಗಳು ಸಂಭವಿಸುವುದನ್ನು ತಡೆಯುವುದಕ್ಕಾಗಿಯೇ ಸ್ಪೀಡ್‌ ಡಿಟೆಕ್ಟರ್‌ಗಳನ್ನು ಅಳವಡಿಸಲಾಗಿದೆ ಎಂದರು.

10 ಕಿ.ಮೀ.ಗೆ ಒಂದರಂತೆ ಅಳವಡಿಕೆ: ಹೆದ್ದಾರಿಯಲ್ಲಿ ಸದ್ಯ ಎರಡು ಕಡೆ ಸ್ಪೀಡ್‌ ಡಿಟೆಕ್ಟರ್‌ ಅಳವಡಿಸಲಾಗಿದೆ. ಮುಂದೆ 10 ಕಿಲೋ ಮೀಟರ್‌ಗೆ ಒಂದರಂತೆ ಇದನ್ನು ಅಳವಡಿಸಲಲಾಗುವುದು. ಆಗ ಅಪಘಾತಗಳನ್ನು ಸಂಪೂರ್ಣವಾಗಿ ತಡೆಯಲು ಸಾಧ್ಯವಾಗಲಿದೆ. ಈ ಬಗ್ಗೆ ಪೊಲೀಸ್‌ ಅಧಿಕಾರಿಗಳು ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದವರೊಂದಿಗೆ ಸಭೆ ಮಾಡಿದ್ದಾರೆ. ನಾನು ಸಹ ಮುಂದಿನ ದಿನಗಳಲ್ಲಿ ಸಭೆ ನಡೆಸುತ್ತೇನೆ ಎಂದರು.

ಮಂಡ್ಯದಲ್ಲಿ ಮತ್ತೊಂದು ದುರಂತ: ವಿಸಿ ನಾಲೆಗೆ ಕಾರು ಉರುಳಿ ನಾಲ್ವರು ಸಾವು

ಸಚಿವ ಎನ್‌.ಚಲುವರಾಯಸ್ವಾಮಿ ಮಾತನಾಡಿ, ಹಿಂದಿನ ಸರ್ಕಾರದವರು ಹೆದ್ದಾರಿ ಕಾಮಗಾರಿಯನ್ನು ಗಂಭೀರವಾಗಿ ಪರಿಗಣಿಸಿದ್ದಿದ್ದರೆ ನ್ಯೂನ್ಯತೆಗಳಾಗುತ್ತಿರಲಿಲ್ಲ. ರಾಷ್ಟ್ರೀಯ ಪ್ರಾಧಿಕಾರದವರ ಗಮನಸೆಳೆದು ಸೌಲಭ್ಯಗಳನ್ನು ಕಲ್ಪಿಸಿ, ಸವೀರ್‍ಸ್‌ ರಸ್ತೆ, ಬೈಪಾಸ್‌ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಬಹುದಿತ್ತು. ಈಗ ನಾವು ಅಧಿಕಾರಕ್ಕೆ ಬಂದ ನಂತರ ಹೆದ್ದಾರಿ ಸಮಸ್ಯೆಗಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇವೆ. ನಾನು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ಹಲವಾರು ಬಾರಿ ಹೆದ್ದಾರಿ ಪರಿಶೀಲನೆ ನಡೆಸಿ ಅಪಘಾತಗಳು ಸಂಭವಿಸಿದಂತೆ ಏನೇನು ಮುನ್ನೆಚ್ಚರಿಕೆ ವಹಿಸಬೇಕೋ ಆ ಎಲ್ಲ ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದರು.

Latest Videos
Follow Us:
Download App:
  • android
  • ios