ಶಿವಮೊಗ್ಗ : ಹಿನ್ನೀರಿನಲ್ಲಿ ಈಜಲು ಹೋಗಿ ಪ್ರವಾಸಿಗ ಸಾವು

ಶಿವಮೊಗ್ಗದ ಚಕ್ರ ಡ್ಯಾಂ  ಹಿನ್ನೀರಿನಲ್ಲಿ ಈಜಲು ತೆರಳಿದ್ದ ಬೆಂಗಳೂರು ಮೂಲದ ಪ್ರವಾಸಿಗರಲ್ಲಿ ಓರ್ವ ಮೃತಪಟ್ಟಿದ್ದು ಮತ್ತೋರ್ವಗೆ ಶೋಧ ಕಾರ್ಯ ನಡೆಯುತ್ತಿದೆ

Tourist Dies in Shivamogga chakra nagar Backwater snr

ಶಿವಮೊಗ್ಗ (ಮಾ.28) : ಹೊಸನಗರ ತಾಲೂಕು ಚಕ್ರ ಡ್ಯಾಂ  ಹಿನ್ನೀರಿನಲ್ಲಿ ಈಜಲು ತೆರಳಿದ್ದ ಪ್ರವಾಸಿಗರಲ್ಲಿ ಓರ್ವ ಮೃತಪಟ್ಟಿದ್ದು, ಮತ್ತೊಬ್ಬರಿಗೆ ಶೋಧಕಾರ್ಯ ಮುಂದುವರಿದಿದೆ.

ಮಾರ್ಚ್ 28ರ ಶನಿವಾರ ಈ ದುರ್ಘಟನೆ ನಡೆದಿದೆ ಬೆಂಗಳೂರು ಮೂಲದ ವಿಶ್ವೇಶ್ವರ (58) ಮೃತಪಟ್ಟವರು. ಹರಿ (58) ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. .

ಬೆಂಗಳೂರಿನ ಬಸವನಗುಡಿಯಿಂದ ನಾಲ್ವರು ಮಹಿಳೆಯರು ಸೇರಿದಂತೆ ಒಟ್ಟು 16 ಮಂದಿ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಚಕ್ರನಗರ ಅರಣ್ಯ ಪ್ರದೇಶದಲ್ಲಿರುವ ಮುತ್ತೂರು ಶ್ರೀ ವನದುರ್ಗಾ ಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಅಲ್ಲಿಂದ ಹಿನ್ನೀರು ಪ್ರದೇಶಕ್ಕೆ ಬಂದಿದ್ದರು. ಈ ವೇಳೆ ಹಿನ್ನೀರಿನಲ್ಲಿ ಈಜುತ್ತಿರುವಾಗ ದುರ್ಘಟನೆ ಸಂಭವಿಸಿದೆ.

ಬೆಂಗಳೂರು: ಟ್ರಕ್‌ನಲ್ಲಿತ್ತು 1 ಕೋಟಿಯ ಗಾಂಜಾ..! .

ನೀರಿನಲ್ಲಿ ಮುಳುಗುತ್ತಿದ್ದ ವಿಶ್ವೇಶ್ವರ ಅವರನ್ನು ರಕ್ಷಿಸಿ ಮಾಸ್ತಿಕಟ್ಟೆಯ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹರಿ ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ನಗರಠಾಣೆ ಪಿಎಸ್ಐ ಶಿವರಾಜ್, ಎಎಸ್ಐ ಗಣಪತಿ ಸೇರಿದಂತೆ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Latest Videos
Follow Us:
Download App:
  • android
  • ios