ಕಾರವಾರ: ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿದ ಪಟ್ಟಣ ಪಂಚಾಯತ್ ಅಧ್ಯಕ್ಷೆ ಖಾಜೀಯಾ
ಕನ್ನಡಾಂಬೆ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲು ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಖಾಜೀಯಾ ಅಪ್ಸಾ ಹುಜೈಫಾ ಎಂಬುವರು ನಿರಾಕರಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆಯುತ್ತಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ.
ಕಾರವಾರ(ನ.01): ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿ ಅಗೌರವ ತೋರಿದ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಾಲಿ ಪಟ್ಟಣದಲ್ಲಿ ಇಂದು(ಶುಕ್ರವಾರ) ನಡೆದಿದೆ.
ಕನ್ನಡಾಂಬೆ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲು ಜಾಲಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಖಾಜೀಯಾ ಅಪ್ಸಾ ಹುಜೈಫಾ ಎಂಬುವರು ನಿರಾಕರಿಸಿದ್ದಾರೆ.
ಶಿಲ್ಪಿ ಅರುಣ್ ಯೋಗಿರಾಜ್, ಮೊಯ್ಲಿ ಸೇರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
ಭಟ್ಕಳ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದಿಂದ ನಡೆಯುತ್ತಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಗಂಗಾಧರ ನಾಯ್ಕ್ ಹಾಗೂ ಸಹಾಯಕ ಆಯುಕ್ತೆ ಡಾ.ನಯನ ಸೂಚಿಸಿದ್ರು ಖಾಜೀಯಾ ಅಪ್ಸಾ ಹುಜೈಫಾ ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸುವ ಮೂಲಕ ಅವಮಾನ ಮಾಡಿದ್ದಾರೆ.