ಬೆಳಗಾವಿ[ಫೆ.08]:  ಸೇತುವೆ ಮೇಲಿಂದ ಟ್ರ್ಯಾಕ್ಟರ್ ವೊಂದು ಬಿದ್ದ ಪರಿಣಾಮ 6 ಮಂದಿ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಇಟಗಿ - ಬೋಗೂರ ಗ್ರಾಮದ ಬಳಿ ಇಂದು[ಶನಿವಾರ] ನಡೆದಿದೆ. 

ಮೃತರೆಲ್ಲರೂ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೋಗೂರು ಗ್ರಾಮದ ಎಂದು ತಿಳಿದು ಬಂದಿದೆ. ಮೃತರೆಲ್ಲರೂ ಬೋಗೂರ ಗ್ರಾಮದಿಂದ ಇಟಗಿಗೆ ಕಬ್ಬು ಕಟಾವು ಮಾಡಲು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗಾಯಾಳುಗಳಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಂಭೀರ ಗಾಯಗೊಂಡವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.  ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿದ್ದೇ ಈ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ.  ಈ ಸಂಬಂಧ ನಂದಗಡ ಪೊಲೀಸ್ ಠಾಣೆಯಲ್ಲಿ   ಪ್ರಕರಣ ದಾಖಲಾಗಿದೆ.