ಕಲಬುರಗಿ(ಮಾ.28): ಶವಸಂಸ್ಕಾರದಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿ 18 ಜನರಿಗೆ ಗಾಯಗಳಾದ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ರೋಡ್ ಕಲ್ಲೂರ ಗ್ರಾಮದ ಬಳಿ ಇಂದು(ಭಾನುವಾರ) ನಡೆದಿದೆ.

ಮೃತ ಮಹಿಳೆಯನ್ನ ಜಿಲ್ಲೆ ಮಳಖೇಡ ಗ್ರಾಮದ ಯಲ್ಲಮ್ಮ ಭೀಮರಾವ್ (41) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಚಿಂಚೋಳಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಹಾವೇರಿ: ಟ್ರ್ಯಾಕ್ಟರ್‌ ಪಲ್ಟಿ, ಬಿಹಾರದ ಇಬ್ಬರು ಕಾರ್ಮಿಕರ ದುರ್ಮರಣ

ಟೈರ್ ಸಿಡಿದು ರಸ್ತೆ ಬದಿಗೆ ಉರುಳಿದ್ದ ಟ್ರಾಕ್ಟರ್ ಉರುಳಿ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಮಿರಿಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.