Asianet Suvarna News Asianet Suvarna News

ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ಟ್ರ್ಯಾಕ್ಟರ್‌ ಪಲ್ಟಿ; ಒರ್ವ ಸಾವು, 40 ವಿದ್ಯಾರ್ಥಿಗಳಿಗೆ ಗಾಯ

ಪ್ರವಾಸಕ್ಕೆ ತೆರಳಿ ವಾಪಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಸುಮಾರು 40 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ತಾಲೂಕಿನ ಮಳಗಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

tractoroverturned One student  died many injured in mudagoda at uttarakannada rav
Author
First Published Jan 7, 2023, 12:55 PM IST

ಮುಂಡಗೋಡ (ಜ.7) : ಪ್ರವಾಸಕ್ಕೆ ತೆರಳಿ ವಾಪಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಪಲ್ಟಿಯಾಗಿ ಓರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದು, ಸುಮಾರು 40 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ತಾಲೂಕಿನ ಮಳಗಿ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ತಾಲೂಕಿನ ಕಲ್ಲಹಕ್ಕಲ ವೀರಾಪುರ(Kallahakkala veerapur) ಗ್ರಾಮದ ಕಾವ್ಯಾ ಬರಮಣ್ಣ ಬ್ಯಾಡಗಿ(Baramanna byadagi) (17) ಮೃತಪಟ್ಟವಿದ್ಯಾರ್ಥಿನಿ. ತಾಲೂಕಿನ ಮಳಗಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಒಂದು ಟ್ರಾಕ್ಟರ್‌ನಲ್ಲಿ 20 ಹಾಗೂ ಇನ್ನೊಂದು ಟ್ರಾಕ್ಟರ್‌ನಲ್ಲಿ 40 ವಿದ್ಯಾರ್ಥಿಗಳು ಪಕ್ಕದ ಕೊಳಗಿ ಗ್ರಾಮಕ್ಕೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿಕೊಂಡು ಬರುವ ವೇಳೆ ಅತಿಥಿ ಉಪನ್ಯಾಸಕರು ಟ್ರಾಕ್ಟರ್‌ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಅತಿವೇಗವಾಗಿ ಟ್ರಾಕ್ಟರ್‌ ಚಲಾಯಿಸಿದರಿಂದ ನಿಯಂತ್ರಣ ತಪ್ಪಿ ಟ್ರಾಕ್ಟರ್‌ ಪಲ್ಟಿಯಾಗಿದೆ.

 ಊಟಕ್ಕೆ ತೆರಳಿದ್ದ ಕೌಶಿಕ್-ಸುಷ್ಮಾಗೆ ಮೃತ್ಯುವಾದ ಟ್ಯಾಂಕರ್

ಗಾಯಗೊಂಡ ವಿದ್ಯಾರ್ಥಿಗಳನ್ನು ಮಳಗಿ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಡಗೋಡ ತಾಲೂಕು ಆಸ್ಪತ್ರೆ ಮತ್ತು ಕೆಲವರನ್ನು ಶಿರಸಿ ಸರ್ಕಾರಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತ ನಡೆದ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗಳಿಗೆ ಆಗಮಿಸಿದ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮುಂಡಗೋಡ ಠಾಣೆ ಸಿಪಿಐ ಸಿದ್ದಪ್ಪ ಸಿಮಾನಿ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ(Visheshwar hegade kageri), ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ(Shivaram hebbar) ಹಾಗೂ ಮಾಜಿ ಶಾಸಕ ವಿ.ಎಸ್‌. ಪಾಟೀಲ(VS Patil) ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳು ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ್ದು, ಮೃತ ವಿದ್ಯಾರ್ಥಿನಿ ಕುಟುಂಬಕ್ಕೆ ಸಾಂತ್ವನ ಸೂಚಿಸಿದ್ದಾರೆ. ಪ್ರವಾಸಕ್ಕೆ ಆಗಮಿಸಿದ್ದ ಬಸ್ ಅಪಘಾತ : ವಿದ್ಯಾರ್ಥಿ ಸಾವು, 12 ಜನರು ಗಂಭೀರ

Follow Us:
Download App:
  • android
  • ios