ಬೆಂಗಳೂರು [ಡಿ.01]: ಕರ್ತವ್ಯ ನಿರತ ಪೊಲೀಸ್ ಇನ್ಸ್ ಪೆಕ್ಟರ್ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 

ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯ ಎಸ್ ಐ ಗಂಗಸಿದ್ಧಯ್ಯಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ. 

ಮೆಜೆಸ್ಟಿಕ್ ಬಳಿಯ ಮೂವಿ ಲ್ಯಾಂಡ್ ಥಿಯೇಟರ್ ಬಳಿ ಡ್ರಿಂಕ್ ಅಂಡ್ ಡ್ರೈವ್  ತಪಾಸಣೆ ವೇಳೆ ಹೃದಯಾಘಾತವಾಗಿದ್ದು,  ನಿರಂತರ ಕೆಲಸದಿಂದ ಆಯಾಸಗೊಂಡಿದ್ದು, ಒತ್ತಡದಿಂದ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಳೆದ ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಟ್ರಾಫಿಕ್ ಇನ್ಸ್ ಪೆಕ್ಟರ್ ಅನಾರೋಗ್ಯದಿಂದ ಮೃತಪಟ್ಟಿದ್ದರು. ಪೊಲೀಸ್ ಇಲಾಖೆಯಲ್ಲಿನ ಒತ್ತಡದ ಕೆಲಸಗಳು ಸಾಕಷ್ಟು ಸಮಸ್ಯೆ ತಂದೊಡ್ಡುತ್ತಿದ್ದು ಆರೋಗ್ಯದ ಸಮಸ್ಯೆಗಳನ್ನು ಎದುರಿಸುವಂತಾಗಿದೆ.

ಜಂಕ್ಷನ್‌ಗಳಲ್ಲಿ ಇನ್ಮುಂದೆ ಇರುತ್ತಾರೆ ಗೊಂಬೆ ಪೊಲೀಸರು!...

ನಿರಂತರವಾದ ಕೆಲಸದ ಒತ್ತಡಗಳು ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತಿದೆ.