ರಾಯಚೂರು(ಜ.19): ರೈಲು ಡಿಕ್ಕಿ ಹೊಡೆದು ತಂದೆ-ಮಗ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಮಂತ್ರಾಲಯ ರೈಲ್ವೇ ನಿಲ್ದಾಣದಲ್ಲಿ ಇಂದು(ಭಾನುವಾರ) ನಡೆದಿದೆ. ಮೃತರ ಗುರುತು ತಿಳಿದು ಬಂದಿಲ್ಲ. 

ಉದ್ಯಾನ ಎಕ್ಸಪ್ರೆಸ್ ರೈಲು ಇಳಿದು ಹಳಿ ದಾಟುವ ವೇಳೆ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಟ್ಟಿದ್ದಾರೆ. ಆದರೆ, ಕೂದಲೆಳೆ ಅಂತರದಲ್ಲಿ ಮಹಿಳೆಯೊಬ್ಬರು ಪಾರಾಗಿದ್ದಾರೆ. ಮೃತರು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ನಾನಾಪೂರ ಗ್ರಾಮದವರು ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಮಂತ್ರಾಲಯ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.