ಮನಿ ಭಾಗ್ಯ: ಪಡಿತರ ಕುಟುಂಬಕ್ಕೆ ಹಣ ವರ್ಗಾವಣೆ
ಬಾಗಲಕೋಟೆ ಜಿಲ್ಲೆಯಲ್ಲಿರುವ ಒಟ್ಟು 4,18,560 ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿಗಳ (ಪಿಎಎಚ್‌ಎಚ್ ಚಾಲ್ತಿಯಲ್ಲಿದ್ದು, ಈ ಪೈಕಿ ಎನ್‌ಐಸಿ ಯಿಂದ ಸ್ವೀಕೃತವಾದ ಸಕ್ರಿಯವಾಗಿರುವ ಹಾಗೂ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವ 2,99,293 ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ.
ಬಾಗಲಕೋಟೆ(ಜು.13): ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆಜಿ ಅಕ್ಕಿ ಬದಲಿಗೆ ಹಣ ಸಂದಾಯ ಮಾಡುವ ಯೋಜನೆಗೆ ಚಾಲನೆ ನೀಡಲಾಗಿದ್ದು, ಜಿಲ್ಲೆಯ 2,99,293 ಪಡಿತ ಚೀಟಿ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ .17,78,08,440ಗಳ ಹಣ ವರ್ಗಾವಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎಂ.ಜಾನಕಿ ತಿಳಿಸಿದರು.
ಈ ಕುರಿತು ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಒಟ್ಟು 4,18,560 ಅಂತ್ಯೋದಯ ಅನ್ನ ಯೋಜನೆ (ಎಎವೈ) ಮತ್ತು ಆದ್ಯತಾ ಪಡಿತರ ಚೀಟಿಗಳ (ಪಿಎಎಚ್‌ಎಚ್ ಚಾಲ್ತಿಯಲ್ಲಿದ್ದು, ಈ ಪೈಕಿ ಎನ್‌ಐಸಿ ಯಿಂದ ಸ್ವೀಕೃತವಾದ ಸಕ್ರಿಯವಾಗಿರುವ ಹಾಗೂ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಿರುವ 2,99,293 ಪಡಿತರ ಚೀಟಿಗಳ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಲಾಗಿದೆ. ಹಣ ಜಮೆಯಾಗದೇ ಉಳಿದಿರುವ ಪಡಿತರ ಚೀಟಿದಾರರು ಕುಟುಂಬದ ಮುಖ್ಯಸ್ಥರು ಜುಲೈ 20ರೊಳಗಾಗಿ ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಮತ್ತು ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡಿಸಿ ಖಾತೆಯನ್ನು ಸಕ್ರಿಯಗೊಳಿಸಿದಲ್ಲಿ ಮಾತ್ರ ಮುಂದಿನ ತಿಂಗಳಿನಿಂದ ಹಣ ಜಮೆಯಾಗುತ್ತದೆ. ಅರ್ಹ ಪಡಿತರ ಚೀಟಿದಾರರು ಡಿಬಿಟಿ ಮೂಲಕ ಹಣ ವರ್ಗಾವಣೆಯಾದ ಬಗ್ಗೆ ಹಾಗೂ ಇತರೆ ವಿವರಗಳಿಗೆ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.
ಹೊಸ ಮೊಬೈಲ್ ಕೊಡದಿದ್ರೆ ಸರ್ವೇ ಸ್ಥಗಿತ; ಸರ್ಕಾರಕ್ಕೆ ಅಂಗನವಾಡಿ ಕಾರ್ಯಕರ್ತೆಯರ ಖಡಕ್ ಎಚ್ಚರಿಕೆ!
ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯ ಕುಟುಂಬದಲ್ಲಿ 04 ಸದಸ್ಯರಿದ್ದರೇ ಸದರಿ ಕುಟುಂಬವು .170 ಗಳನ್ನು 5 ಸದಸ್ಯರನ್ನು ಹೊಂದಿರುವ ಕುಟುಂಬವು .510 ಗಳನ್ನು 06 ಸದಸ್ಯರನ್ನು ಹೊಂದಿರುವ ಕುಟುಂಬವು .850 ಗಳನ್ನು ಪಡೆಯಲಿದ್ದಾರೆ. ಹೆಚ್ಚಿನ ಸದಸ್ಯರಿದ್ದಲ್ಲಿ ಇದೇ ಅನುಪಾತವವು ಮುಂದುವರೆಯುತ್ತದೆ. ಕಳೆದ ಮೂರು ತಿಂಗಳುಗಳಲ್ಲಿ ಪಡಿತರ ಆಹಾರಧಾನ್ಯವನ್ನು ಪಡೆದುಕೊಂಡಿರುವ ಕುಟುಂಬಗಳು ಮಾತ್ರ ನಗದು ವರ್ಗಾವಣೆಯ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ. ಪಡಿತರ ಚೀಟಿಯಲ್ಲಿ ಕುಟುಂಬದ ಮುಖ್ಯಸ್ಥರನ್ನು ಹೊಂದಿರದ ಅಥವಾ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರನ್ನು ಹೊಂದಿರುವ ಪಡಿತರ ಚೀಟಿಗಳನ್ನು ನಗದು ವರ್ಗಾವಣೆ ಸೌಲಭ್ಯದಿಂದ ಹೊರಗಿಡಲಾಗಿದೆ. ಈ ಸಮಸ್ಯೆಯನ್ನು ಸಂಬಂಧಿಸಿದ ತಹಸೀಲ್ದಾರ್ ಕಾರ್ಯಾಲಯಕ್ಕೆ ಭೇಟಿ ನೀಡಿ, ಸರಿಪಡಿಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.
5 ಸದಸ್ಯರಿಗೆ 170 ಜಮೆ
ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಆದೇಶದಲ್ಲಿ ಜಿಲ್ಲೆಯಲ್ಲಿರುವ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಫಲಾನುಭವಿಗಳಿಗೆ ಪ್ರತಿ ತಿಂಗಳು ಹೆಚ್ಚುವರಿಯಾಗಿ ವಿತರಿಸಲಾಗುವ 5 ಕೆ.ಜಿ ಆಹಾರಧಾನ್ಯದ ಬದಲಾಗಿ ಪ್ರತಿ ಕೆ.ಜಿ.ಗೆ 34ಗಳಂತೆ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣವನ್ನು ವರ್ಗಾಯಿಸಲು ಆದೇಶಿಸಲಾಗಿರುತ್ತದೆ. ಸರ್ಕಾರದ ಆದೇಶದಡಿ ಡಿಬಿಟಿ ಮೂಲಕ ಹಣ ಬಿಡುಗಡೆಗೊಳಿಸುವ ಬಗ್ಗೆ ಮಾರ್ಗಸೂಚಿಗಳನ್ನು ಸಹ ಹೊರಡಿಸಿರುತ್ತಾರೆ. ಅದರಂತೆ ಸರ್ಕಾರದ ಆದೇಶದಂತೆ ಆದ್ಯತಾ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ 5 ಕೆ.ಜಿ. ಅಕ್ಕಿಯ ಬದಲಾಗಿ ಪ್ರತಿ ಫಲಾನುಭವಿಗೆ ಪ್ರತಿ ಕೆ.ಜಿ.ಗೆ .34 ರಂತೆ 5 ಸದಸ್ಯರಿಗೆ .170ಗಳಂತೆ ಹಾಗೂ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಯನ್ನು ಹೊಂದಿರುವ ಕುಟುಂಬದಲ್ಲಿ ಮೂರು ಅಥವಾ ಮೂರಕ್ಕಿಂತ ಕಡಿಮೆ ಸದಸ್ಯರಿರುವ ಕುಟುಂಬವು ಈಗಾಗಲೇ ಪ್ರತಿ ತಿಂಗಳು 35 ಕೆ.ಜಿ. ಆಹಾರ ಧಾನ್ಯವನ್ನು ಪಡೆಯುತ್ತಿರುವುದರಿಂದ ಅಂತಹ ಅಂತ್ಯೋದಯ ಅನ್ನ ಯೋಜನೆಯ ಪಡಿತರ ಚೀಟಿ ಕುಟುಂಬಗಳಿಗೆ ನಗದು ಸೌಲಭ್ಯವನ್ನು ನೀಡಲಾಗುವುದಿಲ್ಲ ಎಂದು ಹೇಳಿದರು.