ಬೆಂಗಳೂರು[ಮಾ.02]: ತೃತೀಯ ಲಿಂಗಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಕೆ.ಪಿ.ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತ ದೇಹಪತ್ತೆಯಾಗಿದೆ. ಮೃತರನ್ನು ಗೌತಮ್ ಅಲಿಯಾಸ್‌ ರಮ್ಯಾ ಎಂದು ಗುರುತಿಸಲಾಗಿದೆ.

ಗೌತಮ್‌ ಎಂಟು ತಿಂಗಳ ಹಿಂದೆಯಷ್ಟೇ ತೃತೀಯ ಲಿಂಗಿಯಾಗಿ ಬದಲಾಗಿದ್ದು, ಟೆಂಟ್‌ ರಸ್ತೆ ಸಮೀಪ ಮನೆಯೊಂದರಲ್ಲಿ ಪ್ರತ್ಯೇಕವಾಗಿ ವಾಸವಿದ್ದರು. ಶನಿವಾರ ಮನೆಯಿಂದ ದುರ್ವಾಸನೆ ಬರುತ್ತಿತ್ತು. ಅನುಮಾನಗೊಂಡ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದರು. ಸಿಬ್ಬಂದಿ ಮನೆಗೆ ಹೋಗಿ ನೋಡಿದಾಗಲೇ ಪ್ರಕರಣ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆಯೇ ಅವರು ಮೃತಪಟ್ಟಿರುವ ಶಂಕೆ ಇದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಹೆಣ್ಣಾಗಿ ಪರಿವರ್ತನೆಗೊಂಡಿದ್ದ ರಮ್ಯಾ, ಪರಿಚಯಸ್ಥ ಯುವಕನೊಬ್ಬನ ಜೊತೆ ಒಡನಾಟವಿಟ್ಟುಕೊಂಡಿದ್ದರು. ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರೆಂಬ ಮಾಹಿತಿ ಇದೆ. ಜೊತೆಗೆ, ಹಣಕ್ಕಾಗಿ ಯಾರಾದರೂ ಅವರನ್ನು ಕೊಲೆ ಮಾಡಿರುವ ಸಂಶಯವೂ ಇದೆ. ಕುಟುಂಬಸ್ಥರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.