Asianet Suvarna News Asianet Suvarna News

ಬೇಡಿಕೆ ಈಡೇರಿಸದ ಹಿನ್ನೆಲೆ: ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರಾಜ್ಯ ಸಾರಿಗೆ ನೌಕರರು!

ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದು ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.  ಸಾರಿಗೆ ನೌಕರರ ವೇತನ ಹೆಚ್ಚಳ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ ಹಿನ್ನೆಲೆ ಸರ್ಕಾರದ ಧೋರಣೆ ಖಂಡಿಸಿ ಪ್ರತಿಭಟನೆ.

Transport employees decided to protest agains  the state government at bengaluru rav
Author
First Published Jan 22, 2023, 9:36 AM IST

ಬೆಂಗಳೂರು (ಜ.22) : ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಮತ್ತೆ ಸಿಡಿದೆದ್ದಿದ್ದು ಬೀದಿಗಿಳಿದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

 ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ ಹಿನ್ನೆಲೆ ಸರ್ಕಾರದ ಧೋರಣೆ ಖಂಡಿಸಿ  ಜನವರಿ 24 ರಂದು ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿರುವ ಸಾರಿಗೆ ನೌಕರರು. ಕಳೆದ ವರ್ಷ ಹಲವಾರು ತಿಂಗಳ ನಿರಂತರ ಹೋರಾಟ ನಡೆಸಿದ್ದ ಸಾರಿಗೆ ನೌಕರರು. ನೌಕರರ ಪ್ರತಿಭಟನೆಯಿಂದ ಸಾರ್ವಜನಿಕರು ತೀವ್ರ ತೊಂದರೆಗೆ ಸಿಲುಕಿದ್ದರು. ಇದೀಗ ಮತ್ತೆ ಪ್ರತಿಭಟನೆ ನಡೆಸಲು ಮುಂದಾಗಿರುವುದು ಸರ್ಕಾರಿ ಸಾರಿಗೆಯನ್ನೇ ಅವಲಂಬಿಸಿರುವ ಪ್ರಯಾಣಿಕರನ್ನು ಚಿಂತೆಗೀಡುಮಾಡಿದೆ.

KSRTC ನೌಕರರ ಬೇಡಿಕೆ ಈಡೇರಿಕೆ ಕಷ್ಟ: ಸಿಎಂ ಯಡಿಯೂರಪ್ಪ

6 ವರ್ಷಗಳಿಂದ ವೇತನ ಹೆಚ್ಚಳ ಮಾಡದ ಸರ್ಕಾರ: 

ಕಳೆದ  6 ವರ್ಷಗಳಿಂದ ಸಾರಿಗೆ ನೌಕರರಿಗೆ ವೇತನ ಹೆಚ್ಚಳ ಮಾಡಿಲ್ಲ. ಈ ಹಿಂದೆ ಸರ್ಕಾರ ನೀಡಿದ್ದ ಭರವಸೆ ಹುಸಿಯಾಗಿದೆ. ಯಾವೊಂದು ಬೇಡಿಕೆಯನ್ನು ಈಡೇರಿಸಲು ಮುಂದಾಗಿಲ್ಲ. ಹೀಗಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.  ಮಂಗಳವಾರ ನಾಲ್ಕು ನಿಗಮದ ವಿಭಾಗೀಯ ಕಚೇರಿ ಮುಂದೆ ಧರಣಿ ಹಾಗೂ ಬಿಎಂಟಿಸಿ ನೌಕರರಿಂದ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದ್ದು, ಕಳೆದ ವರ್ಷದ ಸಾರಿಗೆ ನೌಕರರ ಸುದೀರ್ಘ ಹೋರಾಟ ಮತ್ತೆ ಮರುಕಳಿಸಲಿದೆ.

 ರಾಜ್ಯಾದ್ಯಂತ ಬಸ್ ಸಂಚಾರ ವ್ಯತ್ಯಯ ಸಾಧ್ಯತೆ: 

ಸರ್ಕಾರದ ಧೋರಣೆ ಖಂಡಿಸಿ ಸಾವಿರಾರು ಸಾರಿಗೆ ನೌಕರರು ಬೃಹತ್ ಪ್ರತಿಭಟನೆ, ಧರಣಿ ಸತ್ಯಾಗ್ರಹದಲ್ಲಿ ಭಾಗಿಯಾಗ್ತಿರೋದ್ರಿಂದ ನಗರದಲ್ಲಿ ಬಸ್ ಸಂಚಾರ ವ್ಯತ್ಯಯ ಆಗುವ ಸಾಧ್ಯತೆಯಿದೆ. ಕಳೆದ ವರ್ಷವೂ ಸಾರಿಗೆ ನೌಕರರ ಹೋರಾಟಗಳಿಂದ ನಾಗರಿಕರು ಪ್ರಯಾಣಿಸಲು ಬಸ್ ಗಳು ಇಲ್ಲದೆ ತೀವ್ರ ತೊಂದರೆ ಅನುಭವಿಸಿದ್ದರು. ಇದೀಗ ಮತ್ತೆ ಸಾರಿಗೆ ನೌಕರರು ಪ್ರತಿಭಟನೆಗೆ ಮುಂದಾಗಿರುವುದರಿಂದ ಸರ್ಕಾರಿ ಸಾರಿಗೆ ಬಸ್‌ಗಳನ್ನು ಅವಲಂಬಿಸಿರುವ ಸಾರ್ವಜನಿಕರು ತೊಂದರೆಗೆ ಸಿಲುಕಿಕೊಳ್ಳಲಿದ್ದಾರೆ.

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ 2021 ರ ಏಪ್ರಿಲ್ ನಲ್ಲಿ 15 ದಿನಗಳ ಕಾಲ ಮುಷ್ಕರ ನಡೆಸಿದ್ದ ನೌಕರರು. ಆದರೆ ರಾಜ್ಯ ಸರ್ಕಾರ ಇಲ್ಲಿವರೆಗೆ ಯಾವುದೇ ಬೇಡಿಕೆ ಈಡೇರಿಸಲು ಮುಂದಾಗಿಲ್ಲ. ಈ ಹಿನ್ನೆಲೆ ಸರ್ಕಾರ ಗಮನ ಸೆಳೆಯಲು ಸಾರಿಗೆ ನೌಕರರು ಪ್ರತಿಭಟಿಸಲು ನಿರ್ಧಿರಿಸಿದ್ದಾರೆ. 

ಸಾರಿಗೆ ಮುಷ್ಕರ: ಮತ್ತೆ 2,443 ಸಿಬ್ಬಂದಿಯನ್ನ ಅಮಾನತುಗೊಳಿಸಿದ ಸರ್ಕಾರ

6 ವರ್ಷದಿಂದ ವೇತನ ಪರಿಷ್ಕರಣೆ ಆಗಿಲ್ಲ: 

ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡುತ್ತಿದ್ದ ನಿಗಮಗಳು ಆರು ವರ್ಷ ಕಳೆದರೂ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪ ಇಲ್ಲ. ನಿಯಮಬದ್ಧವಾಗಿ 2020 ಮಾರ್ಚ್ ನಲ್ಲಿ ವೇತನ ಪರಿಷ್ಕರಣೆಯಾಗಬೇಕಿತ್ತು. ಆದರೆ ಸರ್ಕಾರ ಇದುವರೆಗೆ ಯಾವುದೇ ರೀತಿಯಲ್ಲಿ ಪ್ರತಿಕ್ರಿಯಿಸಿಲ್ಲ. ಸರ್ಕಾರದ ಧೋರಣೆ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು ಇದೀಗ ಪ್ರತಿಭಟನೆ ಮುಂದಾಗಿದ್ದಾರೆ.  

Follow Us:
Download App:
  • android
  • ios