ವಿಜಯಪುರ(ಫೆ.16): ಎರಡು ಲಾರಿಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಗರಸಂಗಿ ಕ್ರಾಸ್ ಬಳಿ ಇಂದು(ಭಾನುವಾರ) ನಡೆದಿದೆ. 

ಮೃತರನ್ನ ಜಿಲ್ಲೆಯ ಅಥರ್ಗಾದ ಕಾಸು ಅಹಿರವಾಡಗಿ, ನಾಗಠಾಣ ಗ್ರಾಮದ ದಾವಲ್ ಮತ್ತು ಮಧ್ಯ ಪ್ರದೇಶ ಮೂಲದ 65 ವರ್ಷದ ಜಗದೀಶ ಬಾಮಾ ಎಂದು ಗುರುತಿಸಲಾಗಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ವಿಜಯಪುರದಿಂದ ಹುಬ್ಬಳ್ಳಿ ಕಡೆಗೆ ಬೆಳ್ಳುಳ್ಳಿ ಮತ್ತು ಇತರ ಸಾಮಗ್ರಿಗಳನ್ನ ಸಾಗಿಸುತ್ತಿದ್ದ ಲಾರಿ ಎದುರಿಗೆ ಹುಬ್ಬಳ್ಳಿ ಕಡೆಯಿಂದ ವಿಜಯಪುರ ಕಡೆಗೆ ಬಂದ ಟೆಂಗಿನಕಾಯಿ ಸಾಗಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.