ಬಳ್ಳಾರಿ(ಜ.20): ಟ್ರಾಕ್ಟರ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರ ಸಾವನ್ನಪ್ಪಿ, ಮತ್ತಿಬ್ಬರಿಗೆ ಗಾಯವಾದ ಘಟಾನೆ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಇಂದು(ಸೋಮವಾರ) ನಡೆದಿದೆ. 

ಮೃತ ಇಬ್ಬರಲ್ಲಿ ಓರ್ವ ಹೆಸರು ಆನಂದ್ (28) ಎಂದು ಗುರುತಿಸಲಾಗಿದೆ. ಮತ್ತೊಬ್ಬನ ಹೆಸರು ತಿಳಿದು ಬಂದಿಲ್ಲ. ಮತ್ತಿಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಳುಗಳ ಹೆಸರು ಕೂಡ ತಿಳಿದು ಬಂದಿಲ್ಲ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಗಾಯಾಳುಗಳನ್ನ ಜಗಳೂರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಾನಾಹೊಸಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.