ವಿಜಯಪುರ(ಡಿ.01): ರಸ್ತೆ ಬದಿ ನಿಂತಿದ್ದ ಮಹಿಂದ್ರಾ ಪಿಕಪ್ ವಾಹನಕ್ಕೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕೂಡಗಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು(ಭಾನುವಾರ) ನಡೆದಿದೆ. 

ಮೃತರನ್ನು ಧೀರಜ್ ಗಾಳೆ(35) ಹಾಗೂ ನಜೀರ್ ತಳಪಿ(50) ಎಂದು ಗುರುತಿಸಲಾಗಿದೆ. ಇವರು ಮಧ್ಯಪ್ರದೇಶದ ಮೂಲದವರು ಎಂದು ತಿಳಿದು ಬಂದಿದೆ.  

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ರಸ್ತೆ ಬದಿ ನಿಂತಿದ್ದ ಪಿಕಪ್ ವಾಹನಕ್ಕೆ ನಿಡಗುಂದಿ ಕಡೆಯಿಂದ ವಿಜಯಪುರದ ಕಡೆಗೆ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.