ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚೋರರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರಲ್ಲಿ ಘಟನೆ

ಹಾಸನ (ಜು.01): ದೇವಾಲಯದಲ್ಲಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದ ಚೋರರಿಗೆ ಗ್ರಾಮಸ್ಥರೇ ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಗ್ರಾಮದಲ್ಲಿಂದು ಘಟನೆ ನಡೆದಿದೆ. 

ದೇವರಾಜು ಎಂಬಾತ ಹಾಗೂ ಆತನ ಜೊತೆಗೆ ಅಪ್ರಾಪ್ತ ಬಾಲಕ ಸೇರಿಕೊಂಡು ಹುಂಡಿ ಒಡೆದು ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. 

ಪೊಲೀಸರಿಂದಲೇ ಚಿನ್ನ ಸ್ಮಗ್ಲಿಂಗ್; ಕಿಂಗ್ ಪಿನ್ ಆರೋಪಿಗೆ ಜಾಮೀನು .

ಶ್ರೀ ಅಮರಗಿರಿ ಚಿಕ್ಕೋನಹಳ್ಳಿ ಗುಡ್ಡದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಕಳ್ಳತನ ಮಾಡುತ್ತಿದ್ದ ವೇಳೆ ಇಬ್ಬರು ಸಿಕ್ಕಿ ಬಿದ್ದಿದ್ದು ಇಬ್ಬರನ್ನು ಹಿಡಿದು ಥಳಿಸಿದ ಗ್ರಾಮಸ್ಥರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ನುಗ್ಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.