Asianet Suvarna News Asianet Suvarna News

Tumakur : ಮತದಾರರ ಪಟ್ಟಿಸಂಬಂಧ ದೂರುಗಳು ಬರಬಾರದು

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ತುಮಕೂರು ಜಿಲ್ಲಾ ಮತದಾರರ ಪಟ್ಟಿವೀಕ್ಷಕ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ಪಂಕಜ್‌ಕುಮಾರ್‌ಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.

Tumakur  DC order To Serious Work Om voter List snr
Author
First Published Dec 3, 2022, 5:07 AM IST

 ತುಮಕೂರು :  ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸುವಂತೆ ತುಮಕೂರು ಜಿಲ್ಲಾ ಮತದಾರರ ಪಟ್ಟಿವೀಕ್ಷಕ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕಾರ್ಯದರ್ಶಿ ಪಂಕಜ್‌ಕುಮಾರ್‌ಪಾಂಡೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿವಿಶೇಷ ಸಂಕ್ಷಿಪ್ತ ಪ್ರಕಟಣೆ -2023ರ ಸಂಬಂಧ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು ದೋಷರಹಿತ ಮತದಾರರ ಪಟ್ಟಿಸಿದ್ಧತೆಗೆ ಆದ್ಯತೆ ನೀಡಬೇಕು. ತುಮಕೂರು ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ದೂರು ಬರಬಾರದು. ಚುನವಣಾ ಅಯೋಗದ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಯಾವುದೇ ಅನುಮಾನ ಅಥವಾ ಗೊಂದಲಗಳಿದ್ದಲ್ಲಿ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲಾಧಿಕಾರಿಗಳನ್ನು ಸಂಪರ್ಕಿಸುವಂತೆ ಸೂಚಿಸಿದರು.

18 ವರ್ಷ ತುಂಬಿದ ಯುವ ಮತದಾರರು ಮತದಾರರ ಪಟ್ಟಿಯಿಂದ ಹೊರಗೆ ಉಳಿಯದಂತೆ ಕ್ರಮವಹಿಸಬೇಕು. ಈ ನಿಟ್ಟಿನಲ್ಲಿ ಎಲ್ಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಮತ್ತು ಈ ತಿಂಗಳ 3 ಹಾಗೂ 4ರಂದು ವಿಶೇಷ ಆಂದೋಲನ ಕಾರ್ಯಕ್ರಮ ನಡೆಯಲಿದ್ದು, ಬಿಎಲ್‌ಓಗಳು ಮತಗಟ್ಟೆಪ್ರದೇಶದಲ್ಲಿ ಹಾಜರಿದ್ದು, ಮತದಾರರಿಗೆ ಅಗತ್ಯ ಮಾಹಿತಿಯನ್ನು ನೀಡಬೇಕು ಮತ್ತು ಶೇ.100ರಷ್ಟುಮನೆ-ಮನೆ ಭೇಟಿ ಕಾರ್ಯಕ್ರಮ ಪೂರ್ಣಗೊಳ್ಳಬೇಕು ಎಂದು ಸೂಚಿಸಿದರು.

ಸಾರ್ವಜನಿಕರಿಂದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಇನ್ನು 6 ದಿನಗಳು ಮಾತ್ರ ಬಾಕಿ ಉಳಿದಿದ್ದು, ಈ ಅವಧಿಯಲ್ಲಿ ಮತದಾರರಿಂದ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಕೈ ಬಿಡತಕ್ಕವುಗಳ ಬಗ್ಗೆ ಹೆಚ್ಚಿನ ಅರ್ಜಿಗಳು ಹರಿದು ಬರುವ ಕಾರಣ ಈಗಾಗಲೇ ಸ್ವೀಕೃತಗೊಂಡಿರುವ ಅರ್ಜಿ ನಮೂನೆಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸಲಿ ತಿಳಿಸಿದರು.

ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರು ಪ್ರತಿ ದಿನ 3 ರಿಂದ 4 ತಾಸುಗಳ ಕಾಲ ಮತದಾನ ಪಟ್ಟಿಪರಿಷ್ಕರಣೆಗೆ ಸಮಯ ಮೀಸಲಿಡಬೇಕು. ಚುನಾವಣೆಯಲ್ಲಿ ಮತದಾರರ ಪಟ್ಟಿಯೇ ಪ್ರಮುಖ ವಿಷಯವಾಗುತ್ತದೆ. ಮತದಾರರ ಪಟ್ಟಿಯಲ್ಲಿ ದೋಷವಿದ್ದಲ್ಲಿ ಮರು ಮತದಾನದಂತಹ ಪ್ರಕರಣಗಳು ನಡೆಯುತ್ತವೆ. ಆದುದರಿಂದ ಚುನಾವಣೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ದೋಷರಹಿತ ಪರಿಪೂರ್ಣ ಮತದಾರರ ಪಟ್ಟಿಸಿದ್ಧತೆಯತ್ತ ಕಾರ್ಯೋನ್ಮುಖರಾಗಲು ಸೂಚಿಸಿದರು.

ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅವರು, ಮತದಾರರ ಪಟ್ಟಿವೀಕ್ಷಕರಾದ ಶ್ರೀ ಪಂಕಜ್‌ಕುಮಾರ್‌ಪಾಂಡೆ ಅವರಿಗೆ ಜಿಲ್ಲೆಯ ಕುರಿತು ಮಾಹಿತಿ ನೀಡುತ್ತಾ, ಜಿಲ್ಲೆಯಲ್ಲಿ 11 ವಿಧಾನಸಭಾ ಕ್ಷೇತ್ರವಿದ್ದು, ಒಟ್ಟು 2798935 ಜನಸಂಖ್ಯೆಯಿರುತ್ತದೆ. 9-11-2022ರ ಕರಡು ಮತದಾರರ ಪಟ್ಟಿಯನ್ವಯ ಜಿಲ್ಲೆಯಲ್ಲಿ 2162613 ಮತದಾರರಿದ್ದು, ಈ ಪೈಕಿ 1082752 ಪುರುಷ ಹಾಗೂ 1079769 ಮಹಿಳಾ ಮತದಾರಿದ್ದಾರೆ. ಜಿಲ್ಲೆಯಲ್ಲಿ ಇಪಿ ರೇಷಿಯೋ 77.27 ಇರುತ್ತದೆ. ಲಿಂಗಾನುಪಾತ 997 ಇರುತ್ತದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ ಒಟ್ಟು 30165 ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲಾಗಿದ್ದು, ಅಂತೆಯೇ ನ.12 ಹಾಗೂ 20ರಂದು ನಡೆಸಲಾದ ವಿಶೇಷ ಆಂದೋಲನ ಹಿನ್ನೆಲೆಯಲ್ಲಿ 18 ರಿಂದ 19 ವಯೋಮಾನದ 8404 ಮತ್ತು 20 ವರ್ಷ ಮೇಲ್ಪಟ್ಟ4279 ಒಟ್ಟು 12683 ನಮೂನೆ-6 ಸ್ವೀಕೃತವಾಗಿದ್ದು, ಒಟ್ಟು 6591 ನಮೂನೆ-7 ಮತ್ತು 2511 ನಮೂನೆ-8 ಸ್ವೀಕೃತಗೊಂಡಿರುತ್ತವೆ. ಜಿಲ್ಲೆಯಲ್ಲಿ ಒಟ್ಟು 26948 ವಿಶೇಷಚೇತನ ಮತದಾರರಿರುತ್ತಾರೆ ಎಂದು ತಿಳಿಸಿದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ. ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್‌, ಕಲ್ಪಶ್ರೀ, ರಿಷಿ ಆನಂದ್‌ ಸೇರಿದಂತೆ ಎಲ್ಲಾ ತಾಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

ರಾಜಕೀಯ ಪಕ್ಷಗಳ ಸಭೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಕರೆಯಲಾಗಿದ್ದ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಮುಖಂಡರುಗಳನ್ನುದ್ದೇಶಿಸಿ ಮಾತನಾಡಿದ ತುಮಕೂರು ಜಿಲ್ಲಾ ಮತದಾರರ ಪಟ್ಟಿವೀಕ್ಷಕ ಪಂಕಜ್‌ಕುಮಾರ್‌ಪಾಂಡೆ, ಜಿಲ್ಲೆಯಲ್ಲಿ ಮತದಾರರ ಪಟ್ಟಿವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ಇದೇ ಡಿ.8ರವರೆಗೆ ನಡೆಯಲಿದ್ದು, ದೋಷರಹಿತ ಮತದಾರರ ಪಟ್ಟಿಸಿದ್ಧತೆಗೆ ಸಹಕರಿಸುವಂತೆ ತಿಳಿಸಿದರು. ಜಿಲ್ಲೆಯಲ್ಲಿನ ಎಲ್ಲಾ ಮಾನ್ಯತೆ ಪಡೆದ ರಾಷ್ಟ್ರೀಯ ಪಕ್ಷಗಳು ಮತ್ತು ಮಾನ್ಯತೆ ಪಡೆದ ಪಕ್ಷಗಳ ಮುಖಂಡರುಗಳು ಮತಗಟ್ಟೆಸಂಖ್ಯೆಗಳೊಂದಿಗೆ ತಮ್ಮ ಪಕ್ಷಗಳ ಬಿಎಲ್‌ಎಗಳ ಹೆಸರು ಮತ್ತು ಮೊಬೈಲ್‌ ಸಂಖ್ಯೆಯನ್ನು ತಹಶೀಲ್ದಾರ್‌ ಮತ್ತು ಪಾಲಿಕೆ ಆಯುಕ್ತರಿಗೆ ಸಲ್ಲಿಸುವಂತೆ ಅವರು ಮನವಿ ಮಾಡಿದರು. ಅವರು, ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಗೊಂದಲ ಹಾಗೂ ಆಕ್ಷೇಪಣೆಗಳಿದ್ದಲ್ಲಿ ತಮ್ಮನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.

Follow Us:
Download App:
  • android
  • ios