ತುಮಕೂರು (ಜೂ.09):  ಕೋವಿಡ್ 2ನೆ ಅಲೆ ಉಂಟು ಮಾಡಿದ ಆತಂಕದಿಂದ ಎಚ್ಚೆತ್ತುಕೊಂಡ  ಜಿಲ್ಲಾಡಳಿತ ಮೂರನೆ ಅಲೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. 

ಕೋವಿಡ್ ಮೂರನೆ ಅಲೆ ಮಕ್ಕಳಿಗೆ ಹೆಚ್ಚು ತಗುಲುವ ಸಾಧ್ಯತೆಯಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಮರ್ಪಕವಾಗಿ ಶಿಶು ವೈದ್ಯಕೀಯ ವ್ಯವಸ್ಥೆಯನ್ನು ಜಿಲ್ಲಾಡಳಿಯ ಕಲ್ಪಿಸಲು ಸನ್ನದ್ಧವಾಗುತ್ತಿದೆ.

ಈ ಸಂಬಂಧ ತನ್ನ ಕಚೇರಿಯಲ್ಲಿ ಮಾಹಿತಿ ನಿಡಿದ ಜಿಲ್ಲಾಧಿಕಾರಿ ವೈ ಎಸ್  ಪಾಟೀಲ ಅವರು ಈಗಾಗಲೇ ಜಿಲ್ಲೆಯಲ್ಲಿ 16 ಸರ್ಕಾರಿ ಮತ್ತು ಖಾಸಗಿ ಸೇರಿದಂತೆ ಸುಮಾರು 60ಕ್ಕಿಂತ ಹೆಚ್ಚು ಶಿಶು ವೈದ್ಯರಿದ್ದು ಎಲ್ಲಾ ತಾಲೂಕುಗಳಲ್ಲಿಯೂ ಶಿಶು ವೈದ್ಯರ ವ್ಯವಸ್ಥೆ  ಮಾಡಲು ಸಿದ್ಧವಾಗಿದ್ದೇವೆ. ಇದಲ್ಲದೇ ಅವಶ್ಯಕತೆಗೆ ಅನುಗುಣವಾಗಿ ಶಿಶು ವೈದ್ಯಕೀಯ ವಿಭಾಗಕ್ಕೆ ಸಂಬಂಧಿಸಿದ ಸಿದ್ದಾರ್ಥ ಕಾಲೇಜಿನ 8 ಪಿಜಿ  ವಿದ್ಯಾರ್ಥಿಗಳನ್ನು ಹಾಗೂ ಡಿಎನ್‌ಬಿ ಕೋರ್ಸ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು. 

ಗುಡ್ ನ್ಯೂಸ್ : ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಸಂಖ್ಯೆಯಲ್ಲಿ ಭಾರೀ ಇಳಿಕೆ

ಜಿಲ್ಲೆಯಲ್ಲಿ ಒಟ್ಟು 3600 ಹಾಸಿಗೆಗಳಿವೆ. ಈ ಪೈಕಿ 528 ಹಾಸಿಗೆಗಳನ್ನು ಪಿಡಿಯಾಟ್ರಿಕ್ ಹಾಸಿಗೆಗಳಿಗೆ ಮೀಸಲಿಡಲಾಗಿದೆ. ಇದರಲ್ಲಿರುವ 118 ಸರ್ಕಾರಿ ಹಾಸಿಗೆಗಳನ್ನು 180ಕ್ಕೆ ಹೆಚ್ಚಿಸಲು ಸಚಿವರು ನಿರ್ದೇಶಿಸಿದ್ದಾರೆ ಎಂದು ಹೇಳಿದರು. 

ಪೋಷಕರಿಗೆ ತಿಳುವಳಿಕೆ : ಜಿಲ್ಲೆಯಲ್ಲಿ 6 ವರ್ಷದ ಒಳಗಿನ ಮಕ್ಕಳಿಗಾಗಿ ಹಮ್ಮಿಕೊಂಡಿರುವ ನೂತನ ಕಾರ್ಯಕ್ರಮದ ಅಡಿ ಈಗಾಗಲೇ ಗುರುತಿಸಿರುವ ಸುಮಾರು 8000 ಮಕ್ಕಳು ಅಪೌಷ್ಠಿಕತೆ ಹೊಂದಿರುವ  ಮಕ್ಕಳ ಮನೆಗಳ ಪೋಷಕರಿಗೆ ತಿಳುವಳಿಕೆ ನೀಡಲು ಆರೋಗ್ಯ ಹಾಗೂ ಮಹಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚಿಸಲು ನಿರ್ಧಾರ ಮಾಡಲಾಗಿದೆ.  

ಅಪೌಷ್ಟಿಕ ಮಕ್ಕಳಿಗೆ ಕಿಟ್  ತಯಾರು ಮಾಡಿ ನೀಡಲು ಈಗಾಗಲೇ ಸಭೆಯಲ್ಲಿ ನಿರ್ಧರಿಸಲಾಗಿದೆ. ಮಕ್ಕಳಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮಕ್ಕಳ ತಜ್ಞ ವೈದ್ಯರ ಸಮಿತಿ ರಚಿಸಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona