ತುಮಕೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 55 ವರ್ಷದ ಶಾಂತಕುಮಾರ್ ಎಂದು ಗುರುತಿಸಲಾಗಿದೆ. ಕೋತಿತೋಪು ರಸ್ತೆಯಲ್ಲಿ..

ತುಮಕೂರು (ಮೇ.24): ತುಮಕೂರಿನಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು 55 ವರ್ಷದ ಶಾಂತಕುಮಾರ್ ಎಂದು ಗುರುತಿಸಲಾಗಿದ್ದು, ಅವರು ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದ ಕೋತಿತೋಪು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಶಾಂತಕುಮಾರ್ ಅಸ್ವಸ್ಥಗೊಂಡು ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಶಾಂತಕುಮಾರ್ ತುಮಕೂರು ನಗರದ ಎನ್.ಆರ್ ಕಾಲೋನಿ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ದಿಢೀರ್ ಅಸ್ವಸ್ಥತೆಯಿಂದ ಈ ದುರ್ಘಟನೆ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ.

ಅಕಾಲಿಕ ನಿಧನಕ್ಕೆ ಸಂತಾಪ

ಘಟನೆ ಸಂಬಂಧ ತುಮಕೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಾಹಿತಿ ದಾಖಲಾಗಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ. ಪೊಲೀಸ್ ಸಿಬ್ಬಂದಿಯ ಅಕಾಲಿಕ ನಿಧನಕ್ಕೆ ಸಹೋದ್ಯೋಗಿಗಳು ಹಾಗೂ ಸ್ಥಳೀಯರು ಸಂತಾಪ ಸೂಚಿಸಿದ್ದಾರೆ.