ತುಮಕೂರಲ್ಲೂ ಕಾಂಗ್ರೆಸ್‌ಗೆ ಬರುವವರಿದ್ದಾರೆ: ಪರಮೇಶ್ವರ್
ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲೂ ಪಕ್ಷಕ್ಕೆ ಬರುವವರಿದ್ದಾರೆ ಎಂಬ ಸುಳಿವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದಾರೆ.
ತುಮಕೂರು: ಮುಂದಿನ ದಿನಗಳಲ್ಲಿ ನಮ್ಮ ಜಿಲ್ಲೆಯಲ್ಲೂ ಪಕ್ಷಕ್ಕೆ ಬರುವವರಿದ್ದಾರೆ ಎಂಬ ಸುಳಿವನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ನೀಡಿದ್ದಾರೆ.
ಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಬಿಜೆಪಿ ಹಾಗೂ ದಳ ಎರಡೂ ಪಕ್ಷದಿಂದ ಬರುತ್ತಾರೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಐದು ಗ್ಯಾರಂಟಿ ಘೋಷಣೆ ಮಾಡಿದ್ದೆವು. ಇದರಲ್ಲಿ ಮಹಿಳೆಯರಿಗೆ ಗೃಹಲಕ್ಷೀ ಯೋಜನೆ ಘೋಷಣೆ ಮಾಡಲಾಗಿತ್ತು. ಈ ಬಗ್ಗೆ ಅನೇಕ ಟೀಕೆ ಟಿಪ್ಪಣಿಗಳನ್ನು ವಿರೋಧ ಪಕ್ಷಗಳು ಮಾಡಿದ್ದವು. ಕಾಂಗ್ರೆಸ್‌ನವರು ಗ್ಯಾರಂಟಿಗಳನ್ನು ಕೊಡುವುದಿಲ್ಲ, ಸುಮ್ಮನೆ ಹೇಳುತ್ತಾರೆಂದು ತಪ್ಪು ದಾರಿಗೆ ಕರೆದುಕೊಂಡು ಹೋಗುತ್ತಾರೆಂಬ ವಿರೋಧ ಪಕ್ಷಗಳ ಹೇಳಿಕೆ ಗಮನಿಸಿದ್ದೇನೆ. ಜನರು ನಮ್ಮ ಮೇಲೆ ವಿಶ್ವಾಸವಿಟ್ಟು ಅಧಿಕಾರ ಕೊಟ್ಟಿದ್ದಾರೆ. ಹೀಗಾಗಿ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಪರಮೇಶ್ವರ್ ತಿಳಿಸಿದರು.
ಬುಧವಾರ ಮೈಸೂರಿನಲ್ಲಿ ಗೃಹಲಕ್ಷ್ಮಿ ಕಾರ್ಯಕ್ರಮ ಉದ್ಘಾಟನೆ ಆಗಲಿದೆ. ಕಾಂಗ್ರೆಸ್ ನಾಯಕ ರಾಹುಲ… ಗಾಂಧಿ ಭಾಗಿಯಾಗಲಿದ್ದಾರೆ. ಕರ್ನಾಟಕದ ಜನರಿಗೆ ಒಳ್ಳೆಯ ಆಡಳಿತ ನೀಡುತ್ತೇವೆಂದು ಹೇಳಿದ್ದೇವೆ. ಕೊಟ್ಟೇ ಕೊಡುತ್ತೇವೆ ಎಂದ ಅವರು ಜನಪ್ರಿಯ ಯೋಜನೆ ಜಾರಿಗೆ ತಂದಿರುವ ಕಾರಣ ಅಭಿವೃದ್ಧಿ ಸ್ವಲ್ಪ ಹಿಂದೆ ಇರಬಹುದು, ಮುಂದಿನ ದಿನಗಳಲ್ಲಿ ವೇಗ ಆಗಲಿದೆ ಎಂದರು.