ತುಮಕೂರು - ಚುನಾವಣಾ ಪ್ರಚಾರ : ಹಲವು ಮುಖಂಡರು ಕಾಂಗ್ರೆಸ್ ಸೇರ್ಪಡೆ
ತುಮಕೂರು ಲೋಕಾಸಭಾ ಚುನಾವಣೆ ಹಿನ್ನೆಲೆ ಗೃಹಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಮಾ.13 ರ ಬುಧವಾರ ಏರ್ಪಡಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ಗೌಡ ತಿಳಿಸಿದರು.
ಕೊರಟಗೆರೆ : ತುಮಕೂರು ಲೋಕಾಸಭಾ ಚುನಾವಣೆ ಹಿನ್ನೆಲೆ ಗೃಹಸಚಿವ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಚುನಾವಣಾ ಪ್ರಚಾರ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಮಾ.13 ರ ಬುಧವಾರ ಏರ್ಪಡಿಸಲಾಗಿದೆ ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಚಂದ್ರಶೇಖರ್‌ಗೌಡ ತಿಳಿಸಿದರು.
ಪಟ್ಟಣದ ರಾಜೀವ್ ಭವನದಲ್ಲಿ ಕಾಂಗ್ರೆಸ್ ಪಕ್ಷ ಏರ್ಪಡಿಸಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದರು. ಕೊರಟಗೆರೆ ವಿಧಾನಸಭಾ ಕ್ಷೇತ್ರ ಸೇರಿ ದಂತೆ ಬೇರೆ ಕ್ಷೇತ್ರದಿಂದ ಸುಮಾರು ೫ ಸಾವಿರಕ್ಕೂ ಅಧಿಕಾರ ಕಾಂಗ್ರೆಸ್ ಮುಖಂಡರು ಆಗಮಿಸಲಿದ್ದಾರೆ. ಬರುವ ಮುಖಂಡರಿಗೆ ವಾಹನ ಸೇರಿದಂತೆ ಊಟದ ವ್ಯವಸ್ಥೆ ಮಾಡಲಾಗಿದೆ. ತುಮಕೂರು ಜಿಲ್ಲೆಯ ಕಾಂಗ್ರೆಸ್ ಶಾಸಕರು, ಮಾಜಿ ಶಾಸಕರು, ಜಿಪಂ, ತಾಪಂ ಹಾಗೂ ಗ್ರಾಪಂ ಅಧ್ಯಕ್ಷರು ಸದಸ್ಯರು ಆಗಮಿಸಲಿದ್ದಾರೆ ಎಂದು ತಿಳಿಸಿದರು.
ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಶ್ವಥ್‌ನಾರಾಯಣ್ ಮಾತನಾಡಿ, ಎಸ್.ಪಿ.ಮುದ್ದಹನುಮೇಗೌಡ ಅವರು ಕಾರಣಾಂತದಿಂದ ಪಕ್ಷ ಬದಲಾವಣೆ ಮಾಡಿದ್ದರು. ಅವರು ಮತ್ತೆ ನಮ್ಮ ಪಕ್ಷಕ್ಕೆ ಬಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೊರಟಗೆರೆ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಅವರ ಗೆಲುವಿಗೆ ಪಣ ತೊಡೋಣ ಎಂದರು.
ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್ ಮಾತನಾಡಿ, ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳು ಜನರಿಗೆ ತಲುಪಿದ್ದು, ಮತದಾರರು ಈ ಬಾರಿ ಲೋಕಾಸಭಾ ಚುನಾವಣೇಲ್ಲಿ ಕಾಂಗ್ರೆಸ್ ಪರ ಇರುತ್ತಾರೆ ಎಂದು ಭರವಸೆ ಇದೆ ಎಂದರು.
ಕಾರ್ಯಕ್ರಮಕ್ಕೆ ಗೃಹಸಚಿವ ಡಾ.ಜಿ. ಪರಮೇಶ್ವರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಲೋಕಾಸಭಾ ಕಾಂಗ್ರೆಸ್ ಆಭ್ಯರ್ಥಿ ಮುದ್ದಹನುಮೇಗೌಡ, ಶಾಸಕರಾದ ಜಯಚಂದ್ರ, ಗುಬ್ಬಿ ಶ್ರೀನಿವಾಸ್, ಷಡಕ್ಷರಿ, ವೆಂಕಟೇಶ್, ಎಂಎಲ್ಸಿ ರಾಜೇಂದ್ರ ರಾಜಣ್ಣ ಹಾಗೂ ಮುಖಂಡರು ಆಗಮಿಸಲಿದ್ದಾರೆ ಎಂದು ಮುಖಂಡರು ತಿಳಿಸಿದ್ದಾರೆ.
ಸುದ್ದಿಗೊಷ್ಠಿಯಲ್ಲಿ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಜಯಮ್ಮ, ಮುಖಂಡರಾದ ವೆಂಕಟಪ್ಪ, ಟಿ.ಸಿ.ರಾಮಯ್ಯ, ನಾಗಭೂಷಣ, ಸಂದೀಪ್, ಮುನ್ನಾ, ಅರವಿಂದ್, ಕೆ.ಎಲ್.ಎಂ.ಮಂಜು, ನಾಗೇಶ, ಪುಟ್ಟರಾಜು, ರಘು, ನಂಜುಂಡಯ್ಯ ಸೇರಿದಂತೆ ಇತರರು ಇದ್ದರು.