ತುಮಕೂರು : ಸರ್ಕಾರಿ ಶಾಲಾ ಅಭಿವೃದ್ಧಿಗೆ ಒತ್ತು: ಶಾಸಕ ಶ್ರೀನಿವಾಸ್

ಈಗಾಗಲೇ ಶೌಚಾಲಯ ನಿರ್ಮಾಣಕ್ಕೆ 16 ಲಕ್ಷ ರು.ಗಳನ್ನು ಹಾಕಿದ್ದು, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚುವರಿ ಕೊಠಡಿಗಳನ್ನು ‌ ನಿರ್ಮಿಸಿಕೊಡಲಾಗುವುದು. ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕ ಎಸ್.ಆರ್‌. ಶ್ರೀನಿವಾಸ್ ತಿಳಿಸಿದರು.

Tumkur Emphasis on government school development: MLA Srinivas snr

  ಗುಬ್ಬಿ :  ಈಗಾಗಲೇ ಶೌಚಾಲಯ ನಿರ್ಮಾಣಕ್ಕೆ 16 ಲಕ್ಷ ರು.ಗಳನ್ನು ಹಾಕಿದ್ದು, ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚುವರಿ ಕೊಠಡಿಗಳನ್ನು ‌ ನಿರ್ಮಿಸಿಕೊಡಲಾಗುವುದು. ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಶಾಸಕ ಎಸ್.ಆರ್‌. ಶ್ರೀನಿವಾಸ್ ತಿಳಿಸಿದರು.

ತಾಲೂಕಿನ ಕಡಬ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲೆ ವಿಭಾಗದ ನೂತನ ಕೊಠಡಿಗಳ ಉದ್ಘಾಟನೆ ಹಾಗೂ ಶಾರದಾದೇವಿ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವುದರೊಂದಿಗೆ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಗುರು ಹಿರಿಯರು ತಂದೆ-ತಾಯಿಗಳನ್ನು ಗೌರವಿಸುವ ಮೂಲಕ ಸಂಸ್ಕಾರವಂತರಾಗಬೇಕು ಎಂದರು.

ದೇಶದ ಮಹನೀಯರು ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ್ದು, ಎಪಿಜೆ ಅಬ್ದುಲ್ ಅಬ್ದುಲ್ ಕಲಾಂ ಕೂಡ ಸರ್ಕಾರಿ ಶಾಲೆಯಲ್ಲಿ ಓದಿ ಉನ್ನತ ಸ್ಥಾನಕ್ಕೇರಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ತರಬೇತಿ ಪಡೆದ ಗುಣಮಟ್ಟದ ನುರಿತ ಶಿಕ್ಷಕರಿದ್ದು, ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಬೇಕು ಎಂದು ತಿಳಿಸಿದರು.

ಮಹಿಳೆಯರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡುತ್ತಿದ್ದು 2001ರಲ್ಲಿ ಮೋಟಮ್ಮನವರು ಸ್ತ್ರೀ ಶಕ್ತಿ ಸಂಘಗಳನ್ನು ಸ್ಥಾಪಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದಾರೆ ಎಂದರು.

ಕಡಬ ಕರ್ನಾಟಕ ಪಬ್ಲಿಕ್ ಶಾಲೆ ಉತ್ತಮ ವಾತಾವರಣದಲ್ಲಿದ್ದು, ಶಿಕ್ಷಕರಿಂದ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದು ಪ್ರಶಂಸಿದ‌ರು.

ಈ ಸಂದರ್ಭದಲ್ಲಿ ಬಿಇಒ ಲೇಪಾಕ್ಷಪ್ಪ, ಪ್ರಾಂಶುಪಾಲ ಪಾಲಾಕ್ಷ ಹಾಗಲವಾಡಿ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಶಿವಕುಮಾರ್, ಉಪ ಪ್ರಾಂಶುಪಾಲ ರವೀಂದ್ರ, ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣ, ನಟರಾಜ್, ಕ್ಷೇತ್ರ ಸಮನ್ವಯಾಧಿಕಾರಿ ಮಧುಸೂದನ್, ಜಗದೀಶ್ ಪಿಡಿಒ ನಟರಾಜ್, ಗ್ರಾಪಂ ಸದಸ್ಯರು, ಸೇರಿದಂತೆ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.

Latest Videos
Follow Us:
Download App:
  • android
  • ios