ಪಾವಗಡ (ಸೆ.08):  ತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್‌ ಯುವ ಮುಖಂಡ ಪಳವಳ್ಳಿ ಸುರೇಶ್‌(35)ಸೋಮವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ ಪತ್ನಿ ಇದ್ದಾರೆ.

ಪಾವಗಡ ತಾಲೂಕು ಪಳವಳ್ಳಿ ಗ್ರಾಮದ ವಾಸಿ ಸುರೇಶ್‌ ಗ್ರಾಪಂ ವ್ಯಾಪ್ತಿಯ ಜೆಡಿಎಸ್‌ ಯುವ ಮುಖಂಡರಾಗಿ ಸೇವೆ ಸಲ್ಲಿಸುತ್ತಿದ್ದು, ಇತರೆ ಹೋರಾಟ ಮತ್ತು ಸಮಾಜಮುಖಿ ಕೆಲಸಗಳಲ್ಲಿ ಸಕ್ರಿಯರಾಗಿದ್ದರು. ಸುರೇಶ್‌ಗೆ ಇತ್ತೀಚೆಗೆ ಜ್ವರ ಕಾಣಿಸಿಕೊಂಡಿದ್ದು ಬೆಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ.

ಕೊರೋನಾ ಹೆಚ್ಚಳ: ಹಾಟ್ ಸ್ಪಾಟ್ ಜಿಲ್ಲೆಗಳ ಮೇಲೆ ಕೇಂದ್ರ ನೇರ ನಿಗಾ

ಪಳವಳ್ಳಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರೆವೇರಿಸಿದ್ದು ಮಾಜಿ ಶಾಸಕ ಕೆ.ಎಂ. ತಿಮ್ಮರಾಯಪ್ಪ, ಹಿರಿಯ ಮುಖಂಡ ಮಾನಂ ವೆಂಕಟಸ್ವಾಮಿ, ತಾಲೂಕು ಜೆಡಿಎಸ್‌ ರೈತ ಘಟಕದ ಅಧ್ಯಕ್ಷ ಗಂಗಾಧರ ನಾಯ್ಡ್‌ ಸೇರಿದಂತೆ ಹಲವಾರು ಜೆಡಿಎಸ್‌ ಕಾರ್ಯಕರ್ತರು ಮೃತರ ಅಂತಿಮ ದರ್ಶನ ಪಡೆದು ಸಂತಾಪ ವ್ಯಕ್ತಪಡಿಸಿದ್ದಾರೆ.