ತುಮಕೂರು : ಕುಷ್ಟರೋಗ ಪತ್ತೆ, ಜಾಗೃತಿ ಆಂದೋಲನ

ಸರ್ಕಾರ ಆದೇಶನ್ವಯ ಕುಷ್ಟರೋಗವನ್ನು ಸಂಪೂರ್ಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಇಂದಿನಿಂದ ತಾಲೂಕಿನಾದ್ಯಂತ ಕುಷ್ಟರೋಗ ಪತ್ತೆ ಹಾಗೂ ಜಾಗೃತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ತಿರುಪತಯ್ಯ ಹೇಳಿದರು.

Tumkur  Leprosy detection, awareness movement snr

 ಪಾವಗಡ : ಸರ್ಕಾರ ಆದೇಶನ್ವಯ ಕುಷ್ಟರೋಗವನ್ನು ಸಂಪೂರ್ಣ ನಿಯಂತ್ರಿಸುವ ಹಿನ್ನೆಲೆಯಲ್ಲಿ ಇಂದಿನಿಂದ ತಾಲೂಕಿನಾದ್ಯಂತ ಕುಷ್ಟರೋಗ ಪತ್ತೆ ಹಾಗೂ ಜಾಗೃತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ತಿರುಪತಯ್ಯ ಹೇಳಿದರು.

ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಯಿಂದ ಬುಧವಾರ ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯ ಅವರಣದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಕುಷ್ಟ ರೋಗ ಪತ್ತೆ ಹಚ್ಚುವ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದರು.

ತಾಲೂಕಿನಲ್ಲಿ ಕುಷ್ಟ ರೋಗಿಗಳ ಪ್ರಮಾಣವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಇಂದಿನಿಂದ 15 ದಿನಗಳ ಕಾಲ ಪಾವಗಡ ನಗರ ಸೇರಿದಂತೆ ತಾಲೂಕಿನ ಗ್ರಾಮಗಳಲ್ಲಿ ಸಮೀಕ್ಷೆ ಕೈಗೊಳ್ಳಲಿದ್ದೇವೆ. ಸರ್ಕಾರದ ಮಾರ್ಗದರ್ಶನದ ಅಗತ್ಯ ಕ್ರಮ ಅನುಸರಿಸುವ ಮೂಲಕ ಕುಷ್ಟರೋಗದ ಬಗ್ಗೆ ಜಾಗೃತಿ ಮತ್ತು ರೋಗಿಗಳ ಪತ್ತೆಗೆ ಮುಂದಾಗಿದ್ದೇವೆ. ಇದರ ಜತೆ ಕರೋನ ಸೋಂಕಿನಂತಹ ರೋಗಗಳು ಉಲ್ಬಣವಾಗುತ್ತಿದ್ದು, ಸೋಂಕು ತಡೆಯಲು ಮಾಸ್ಕ್‌ ಹಾಗೂ ಸಾಮಾಜಿಕ ಅಂತರ ಮತ್ತು ನೈರ್ಮಲ್ಯ ಶುಚಿತ್ವ ಹಾಗೂ ಆರೋಗ್ಯಕರ ಜೀವನಕ್ಕೆ ಇನ್ನಿತರೆ ಮುಂಜಾಗ್ರತ ಕ್ರಮ ಅನುಸರಿಸಬೇಕಿದೆ.ಈ ಬಗ್ಗೆ ಆಸ್ಪತ್ರೆಯ ಸಿಬ್ಬಂದಿಯಿಂದ ಹೆಚ್ಚು ಜಾಗೃತಿ ಮೂಡಿಸುವುದಾಗಿ ಹೇಳಿದರು.

ಇದೇ ವೇಳೆ ಹಿರಿಯ ಆರೋಗ್ಯ ನಿರೀಕ್ಷಕ ಚಂದ್ರಶೇಖರ್, ರಾಜಣ್ಣ, ಅನಿಲ್ ಕುಮಾರ್ ಹಾಗೂ ಇತರೆ ಹಲವು ವೈದ್ಯರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios