TumkUr : ಶೇ.100ರಷ್ಟುಮತದಾನ ನಡೆಯಲಿ: ವಿಶ್ವೇಶ್ವರ

ಮೇ 10ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ತಿಪಟೂರು ಕ್ಷೇತ್ರದ ನಗರಸಭಾ ವ್ಯಾಪ್ತಿಯಲ್ಲಿ ಶೇ.100 ಕ್ಕೆ 100 ರಷ್ಟುಮತದಾನ ಪ್ರಕ್ರಿಯೆ ನಡೆಯಬೇಕಿದ್ದು ಈ ನಿಟ್ಟಿನಲ್ಲಿ ಎಲ್ಲರಿಂದಲೂ ಮತದಾನ ಮಾಡಿಸೋಣ ಎಂಬ ಸಂಕಲ್ಪವನ್ನು ನಗರದ ವಾಸಿಗಳು ಮಾಡಬೇಕೆಂದು ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ ತಿಳಿಸಿದರು.

TumkUr  Let 100 percent voting take place: Vishweshwar snr

ತಿಪಟೂರು: ಮೇ 10ರಂದು ನಡೆಯಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ತಿಪಟೂರು ಕ್ಷೇತ್ರದ ನಗರಸಭಾ ವ್ಯಾಪ್ತಿಯಲ್ಲಿ ಶೇ.100 ಕ್ಕೆ 100 ರಷ್ಟುಮತದಾನ ಪ್ರಕ್ರಿಯೆ ನಡೆಯಬೇಕಿದ್ದು ಈ ನಿಟ್ಟಿನಲ್ಲಿ ಎಲ್ಲರಿಂದಲೂ ಮತದಾನ ಮಾಡಿಸೋಣ ಎಂಬ ಸಂಕಲ್ಪವನ್ನು ನಗರದ ವಾಸಿಗಳು ಮಾಡಬೇಕೆಂದು ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದರಗಡೆ ತಿಳಿಸಿದರು.

ನಗರದ ಮಾವಿನತೋಪು ಶನೇಶ್ವರ ದೇವಸ್ಥಾನದಿಂದ ರೈಲ್ವೆ ಸ್ಟೇಷನ್‌ ರಸ್ತೆಯವರೆಗೆ ಹಮ್ಮಿಕೊಂಡಿದ್ದ ನಮ್ಮ ನಡೆ ಮತದಾರರಿಗೆ ಮತಗಟ್ಟೆ ತೋರಿಸುವ ಕಡೆ ಎಂಬ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಧಾನಸಭಾ ಚುನಾವಣೆಯ ಪ್ರಯುಕ್ತ ಜಿಲ್ಲಾ ಸ್ವೀಪ್‌ ವತಿಯಿಂದ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಪ್ರತಿ ವಾರ್ಡ್‌ಗಳಲ್ಲಿ ಮತದಾನದ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ನಗರದ 5ನೇ ವಾರ್ಡಿನಿಂದ ಜಾಥಾ ಪ್ರಾರಂಭಿಸಲಾಗಿದೆ. ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬ ಮತದಾರು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು. ವಿಶೇಷಚೇತನರಿಗೆ ವಾಹನದ ವ್ಯವಸ್ಥೆ, ವಯೋ ವೃದ್ಧರಿಗೆ ಮನೆಯಲ್ಲಿಯೇ ಮತದಾನ ಮಾಡುವ ವ್ಯವಸ್ಥೆಯನ್ನು ಮೊದಲ ಬಾರಿಗೆ ಆಯೋಜಿಸಲಾಗಿದ್ದು ಇದರ ಸದ್ಬಳಕೆಯನ್ನು ಮಾಡಿಕೊಳ್ಳಬೇಕೆಂದರು.

ಜಾಥಾದಲ್ಲಿ ಆರೋಗ್ಯ ನಿರೀಕ್ಷಕ ಸಚಿನ್‌, ನಗರಸಭೆ ಅಧಿಕಾರಿಗಳು ಸೇರಿದಂತೆ 80ಕ್ಕೂ ಹೆಚ್ಚು ವಾರ್ಡಿನ ನಿವಾಸಿಗಳು ಸ್ಥಳೀಯರು ಭಾಗವಹಿಸಿದ್ದರು.

 ಅಂಚೆ ಮತಪತ್ರದ ಮೂಲಕ ಸಾವಿರಾರು ನೋಂದಣಿ

ಮಡಿಕೇರಿ (ಏ.27) : ವಿಧಾನಸಭಾ ಚುನಾವಣೆ ಸಂಬಂಧ ಈಗಾಗಲೇ 80 ವರ್ಷ ಮೇಲ್ಪಟ್ಟವರು ಅಂಚೆ ಮತಪತ್ರ ಮೂಲಕ ಮತದಾನ ಮಾಡುವಂತಾಗಲು ಗುರುತಿಸಲಾಗಿದ್ದು, ಈ ಸಂಬಂಧ ಏಪ್ರಿಲ್‌, 29 ರಿಂದ ಮೇ 6ರ ವರೆಗೆ ಮನೆ ಮನೆಗೆ ತೆರಳಿ ಅಂಚೆ ಮತಪತ್ರ ಮೂಲಕ ಮತದಾನ ಮಾಡಿಸುವಂತಾಗಬೇಕು ಎಂದು ಸಂಬಂಧಪಟ್ಟಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಸೂಚಿಸಿದ್ದಾರೆ.

ನಗರದ ಗಾಂಧಿ ಭವನದಲ್ಲಿ ಸೆಕ್ಟರ್‌ ಅಧಿಕಾರಿಗಳಿಗೆ ಮತ್ತು ಪೋಲಿಂಗ್‌ ಅಧಿಕಾರಿಗಳಿಗೆ ಬುಧವಾರ ನಡೆದ ತರಬೇತಿ ಕಾರ್ಯಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

25 ವರ್ಷ ಶಾಸಕನಾಗಿ ಪಿಕ್ನಿಕ್‌ಗೆ ಹೋಗಿದ್ದ ಅಪ್ಪಚ್ಚುರಂಜನ್: ಅಭಿವೃದ್ಧಿಯೇ ಮಾಡಿಲ್ಲ

ಕೊಡಗು(Kodagu) ಜಿಲ್ಲೆಯಲ್ಲಿ 80 ವರ್ಷ ಮೇಲ್ಪಟ್ಟವರು 1992 ಮಂದಿ ಅಂಚೆ ಮತಪತ್ರ ಮೂಲಕ ಮತ ಚಲಾಯಿಸಲು ಮುಂದಾಗಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ(Madikeri Assembly constituency)ದಲ್ಲಿ 1,010 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರ(Virajapete assembly)ದಲ್ಲಿ 982 ಮಂದಿ, ಹಾಗೆಯೇ ವಿಕಲಚೇತನರು(ಪಿಡಬ್ಲ್ಯುಡಿ) 482 ಮಂದಿ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 268 ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 214 ಮಂದಿ ವಿಕಲಚೇತನರು ಅಂಚೆ ಮತಪತ್ರದ ಮೂಲಕ ಮತ ಚಲಾಯಿಸಲಿದ್ದು, ಒಟ್ಟಾರೆ 2,474 ಮಂದಿ ಅಂಚೆ ಮತಪತ್ರ ಮೂಲಕ (ನಮೂನೆ-12 ಡಿ) ಮತ ಹಕ್ಕು ಚಲಾಯಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸೆಕ್ಟರ್‌ ಅಧಿಕಾರಿಗಳು ಮತ್ತು ಪೋಲಿಂಗ್‌ ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ನಿಯಮಾನುಸಾರ ಅಂಚೆ ಮತಪತ್ರದ ಮೂಲಕ ಮತದಾನ ಮಾಡಿಸಿಕೊಂಡು ಬರಬೇಕು ಎಂದು ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.

Latest Videos
Follow Us:
Download App:
  • android
  • ios