Asianet Suvarna News Asianet Suvarna News

Tumakur : "ಬೈಚಾಪುರ ಗ್ರಾ.ಪಂ.ಗೆ" ಗಾಂಧಿ ಗ್ರಾಮ ಪುರಸ್ಕಾರಕ್ಕೆ

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕರ್ನಾಟಕದ 233 ಗ್ರಾ.ಪಂ.ಗಳು ಆಯ್ಕೆಯಾಗಿವೆ. ಈ ಕುರಿತು ಮಾಹಿತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, " ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರತಿ ವರ್ಷದಂತೆ ಈ ಬಾರಿಯೂ ಗಾಂಧಿ ಜಯಂತಿ ದಿನದಂದು ಅತ್ಯುತ್ತಮ ಗ್ರಾ.ಪಂ.ಗೆ " ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ.

Tumkur : "To Baichapur Village" for Gandhi Village Award snr
Author
First Published Oct 15, 2023, 8:01 AM IST

 ಕೊರಟಗೆರೆ: ಗಾಂಧಿ ಗ್ರಾಮ ಪುರಸ್ಕಾರಕ್ಕೆ ಕರ್ನಾಟಕದ 233 ಗ್ರಾ.ಪಂ.ಗಳು ಆಯ್ಕೆಯಾಗಿವೆ. ಈ ಕುರಿತು ಮಾಹಿತಿ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, " ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರತಿ ವರ್ಷದಂತೆ ಈ ಬಾರಿಯೂ ಗಾಂಧಿ ಜಯಂತಿ ದಿನದಂದು ಅತ್ಯುತ್ತಮ ಗ್ರಾ.ಪಂ.ಗೆ " ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗಿದೆ. ಈ ಬಾರಿ ಬೈಚಾಪುರ ಗ್ರಾ.ಪಂ.ಗಳು ಆಯ್ಕೆಯಾಗಿದೆ. ಆಯ್ಕೆಯಾದ ಗ್ರಾ.ಪಂ.ಗೆ ಪ್ರಶಸ್ತಿ ಪತ್ರವನ್ನು ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್ ಸಭಾಂಗಣದಲ್ಲಿ ಅ.2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಣೆ

ವಿವಿಧ ಮಾನದಂಡದ ಮೂಲಕ ಆಯ್ಕೆ: 

ಜನರ ಗುಣಮಟ್ಟ ಸುಧಾರಣೆ, ಸಂಪನ್ಮೂಲ ಕ್ರೋಢೀಕರಣ, ಕುಡಿವ ನೀರು, ಶೌಚಾಲಯ, ನೈರ್ಮಲ್ಯ, ರಸ್ತೆ, ಬೀದಿ ದೀಪಗಳ ನಿರ್ವಹಣೆ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಗ್ರಾ.ಪಂ.ಮಟ್ಟದ ಒಕ್ಕೂಟ ಹಾಗೂ ಮನೆ ಮನೆಗಳಿಂದ ಘನ ತ್ಯಾಜ್ಯ ಸಂಗ್ರಹಿಸಲು ಉಪಯೋಗಿಸುವ ವಾಹನಕ್ಕೆ ಮಹಿಳಾ ಚಾಲಕರನ್ನು ನೇಮಕ ಮಾಡುವಲ್ಲಿ ಕೈಗೊಂಡಿರುವ ಕ್ರಮಗಳನ್ನು ಆಧರಿಸಿ ಪುರಸ್ಕಾರಕ್ಕೆ ಗ್ರಾ.ಪಂ.ಆಯ್ಕೆ ಮಾಡಲಾಗಿದೆ.

ಓದುವ ಬೆಳಕು ಕಾರ್ಯಕ್ರಮದ ಮೂಲಕ ಮಕ್ಕಳನ್ನು ಅರಿವು ಕೇಂದ್ರಗಳತ್ತ ಆಕರ್ಷಿಸಲು ಕೈಗೊಂಡಿರುವ ಕ್ರಮಗಳು ಸಹ ಗ್ರಾಮ ಪಂಚಾಯತಿಗಳನ್ನು ಪುರಸ್ಕಾರಕ್ಕೆ ಪರಿಗಣಿಸುವಲ್ಲಿ ಮಾರ್ಗಸೂಚಿಗಳಾಗಿವೆ.

ಆಯ್ಕೆ ಮಾಡಿದ್ದು ಹೇಗೆ? 

ಗಾಂಧಿ ಗ್ರಾಮ ಪುರಸ್ಕಾರಕ್ಕಾಗಿ ಗ್ರಾ.ಪಂ.ನಿಂದ ಅರ್ಜಿ ಆಹ್ವಾನಿಸಿ, ತಂತ್ರಾಂಶದ ಮೂಲಕ ಉತ್ತರಿಸಿದ ವಿವರಗಳಿಗನುಗುಣವಾಗಿ ಪ್ರತಿ ತಾಲೂಕಿನಲ್ಲಿ ಹೆಚ್ಚು ಅಂಕ ಗಳಿಸಿರುವ ಐದು ಗ್ರಾ.ಪಂ.ಆರಿಸಿ, ಸ್ಥಳ ಪರಿಶೀಲನೆ, ದಾಖಲಾತಿ ಪರಿಶೀಲಿಸಿ, ಆಯಾ ಜಿ.ಪಂ. ಸಿಇಒ ಅಧ್ಯಕ್ಷತೆಯಲ್ಲಿನ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ತಾಲೂಕಿಗೆ ಒಂದರಂತೆ ಗ್ರಾ.ಪಂ. ಆಯ್ಕೆ ಮಾಡಿ ಸರ್ಕಾರಕ್ಕೆ ಸಲ್ಲಿಸಲಾಯಿತು.

ಐದು ಲಕ್ಷ ಪ್ರೋತ್ಸಾಹ ಧನ: ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾ.ಪಂ.ಗೆ ಪ್ರಶಸ್ತಿ ಪ್ರಮಾಣ ಪತ್ರ , ಸ್ಮರಣಿಕೆ ಹಾಗೂ 5ಲಕ್ಷ ಪ್ರೋತ್ಸಾಹ ಧನವನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕಾ ಖರ್ಗೆ ಮಾಹಿತಿ ನೀಡಿದ್ದರು.

 ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಿ ಮಹಿಳೆಯರಿಗೆ ಶೇ 50 ರಷ್ಟು ಆದ್ಯತೆ ನೀಡಲಾಗಿದೆ, ಎನ್.ಆರ್ ಐಜಿ ಕೆಲಸಗಳಲ್ಲಿ ಉತ್ತಮವಾದ ಪ್ರಗತಿಯನ್ನು ಸಾಧಿಸಿದ್ದಾರೆ. ಈ ಗ್ರಾ.ಪಂ.ಗೆ ಬರುವ ಹಳ್ಳಿಗಳಿಗೆ ಮೂಲಭೂತ ಸೌಕರ್ಯ, ಅನೇಕ ಕಾಮಗಾರಿ ಒದಗಿಸಲಾಗಿದೆ. ದಾಖಲಾತಿ ಸಮಪರ್ಕ ನಿರ್ವಹಣೆ ಹಿನ್ನೆಲೆ ಬೈಚಾಪುರ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಸಿಇಒ ಪ್ರಭು ಅವರ ಆದೇಶದ ಮೇರೆಗೆ ಆಯ್ಕೆ ಮಾಡಲಾಗಿದೆ

 ದೊಡ್ಡಸಿದ್ದಯ್ಯಇಓ ಕೊರಟಗೆರೆ 

Follow Us:
Download App:
  • android
  • ios