ರೈತರಿಗೆ ಗುಡ್ ನ್ಯೂಸ್: ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು
* ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು
* ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ
* ಆನಂದ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧಾರ
ಕೊಪ್ಪಳ, (ಜುಲೈ.12): ತುಂಗಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಜುಲೈ 18ರಿಂದ ನವೆಂಬರ್ 30ರ ವರೆಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಇಂದು (ಸೋಮವಾರ) ಕೊಪ್ಪಳದ ಮುನಿರಾಬಾದ್ನ ಕಾಡಾ ಕಚೇರಿಯಲ್ಲಿ ಸಚಿವ ಆನಂದ್ ಸಿಂಗ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜುಲೈ 18ರಿಂದ ಎಡದಂಡೆ ಮುಖ್ಯ ಕಾಲುವೆಗೆ 4,100ಕ್ಯೂಸೆಕ್ ನೀರು ಬಿಡಲಾಗುವುದು. ಬಲದಂಡೆ ಕೆಳಮಟ್ಟದ ಕಾಲುವೆಗೆ ಪ್ರತಿದಿನ 700 ಕ್ಯೂಸೆಕ್ ನೀರು ಬಿಡಲಾಗುವುದು. ಜುಲೈ 18ರಿಂದ ನವೆಂಬರ್ 30ರ ವರೆಗೆ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ನಿತ್ಯ 1130 ಕ್ಯೂಸೆಕ್ ನೀರು ಬಿಡಲಾಗುವುದು ನಿರ್ಧಾರವಾಗಿದೆ.
ಜಲಾಯಶದಿಂದ ನೀರು ಬಿಡುವ ಕುರಿತು ಬಳ್ಳಾರಿ ಉಸ್ತುವಾರಿ ಸಚಿವ ಆನಂದಸಿಂಗ್ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ಬಳ್ಳಾರಿ, ವಿಜಯನಗರ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯ ಜನಪ್ರತಿನಿಧಿ, ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ರು.
ಕೊಪ್ಪಳ, ಬಳ್ಳಾರಿ, ವಿಜಯನಗರ, ರಾಯಚೂರು ಜಿಲ್ಲೆಯಲ್ಲಿ ಭತ್ತ ನಾಟಿಗೆ ಈಗಾಗಲೇ ರೈತರು ಹೊಲಗಳನ್ನ ಸಜ್ಜುಗೊಳಿಸುತ್ತಿದ್ದಾರೆ.