ಒಂದೆ ದಿನ ಎರಡೆರಡು ಅಪಘಾತ ನಡೆದಿದೆ. ದಾರುಣ ಅಪಘಾತಗಳಿಗೆ ಮೈಸೂರು ರಸ್ತೆ ಸಾಕ್ಷಿಯಾಗಿದ್ದು ಬೈಕ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಬೆಂಗಳೂರು[ಆ.18] ಒಂದೇ ರಾತ್ರಿ..ಒಂದೇ ಮುಖ್ಯ ರಸ್ತೆಯಲ್ಲಿ ಎರಡು ಪ್ರತ್ಯೇಕ ಅಪಘಾತಗಳು ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ನಡೆದಿದೆ.ಗುರುವಾರ ತಡ ರಾತ್ರಿ, 25 ವರ್ಷ ಹರೆಯದ ಯುವಕ ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣದ ಬಳಿ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ನಂತರ ಲಾರಿ ನೆಲಕ್ಕೆ ಬಿದ್ದ ಬೈಕ್ ಸವಾರನ ಮೇಲೆ ಹರಿದಿದ್ದು ಯುವಕನ ತಲೆ ಛಿದ್ರವಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಇದಾದ ಒಂದೇ ಗಂಟೆ ಅವಧಿಯಲ್ಲಿ ಅದೇ ರಸ್ತೆಯ ಮತ್ತೊಂದು ಕಡೆ ಇಂಡಿಕಾ ಕಾರು ಪಲ್ಟಿಯಾಗಿದೆ. ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ..ಕಾರ್ನ ಚಾಲಕನ ಅಜಾಗರುಕತೆಯಿಂದಲೇ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.(ಸಾಂದರ್ಭಿಕ ಚಿತ್ರ]
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
