ವಿದ್ಯಾರ್ಥಿಗಳಿಗೆ ಕೆಎಸ್ಆರ್‌ಟಿಸಿಯಿಂದ ಗುಡ್ ನ್ಯೂಸ್

ಕಳೆದ ಕೆಲವು ದಿನಗಳಿಂದ ಕುಣಿಗಲ್ ನಿಂದ ತುಮಕೂರಿಗೆ ವಿದ್ಯಾರ್ಥಿಗಳು ಸಂಚರಿಸುವ ಸಂದರ್ಭದಲ್ಲಿ ಬಸ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗಾಗಿ ಎರಡು ಬಸ್ ಗಳನ್ನು ಶಾಸಕ ಡಾ. ರಂಗನಾಥ ಲೋಕಾರ್ಪಣೆ ಮಾಡಿದರು

Two buses added to Kunigal KSRTC snr

 ಕುಣಿಗಲ್:  ಕಳೆದ ಕೆಲವು ದಿನಗಳಿಂದ ಕುಣಿಗಲ್ ನಿಂದ ತುಮಕೂರಿಗೆ ವಿದ್ಯಾರ್ಥಿಗಳು ಸಂಚರಿಸುವ ಸಂದರ್ಭದಲ್ಲಿ ಬಸ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗಾಗಿ ಎರಡು ಬಸ್ ಗಳನ್ನು ಶಾಸಕ ಡಾ. ರಂಗನಾಥ ಲೋಕಾರ್ಪಣೆ ಮಾಡಿದರು

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಎರಡು ಹೊಸ ಬಸ್ ಗಳನ್ನು ಟೇಪ್ ಕತ್ತರಿಸುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿದರು.

ಇತ್ತೀಚೆಗಷ್ಟೇ ಕುಣಿಗಲ್ ಪಟ್ಟಣದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ಘಟನೆ ಹಿನ್ನೆಲೆಯಲ್ಲಿ ಶಾಸಕ ಡಾ. ರಂಗನಾಥ್‌, ಕುಣಿಗಲ್ ಕೆಎಸ್ಆರ್‌ಟಿಸಿ ಡಿಪೋ ಗೆ ಹೊಸದಾಗಿ ಎರಡು ಬಸ್ ಮಂಜೂರು ಮಾಡಿ ರುವುದಾಗಿ ತಿಳಿಸಿದ್ದಾರೆ. ಅಭಿವೃದ್ಧಿ ಕೆಲಸಗಳ ಜೊತೆಗೆ ಇನ್ನಷ್ಟು ಸೇವೆಗಳು ಪಡೆಯಬೇಕಾದರೆ ಕೆಲವು ಸಂದರ್ಭದಲ್ಲಿ ಸಮಸ್ಯೆ ಉಂಟಾಗುತ್ತದೆ. ಪ್ರತಿಯೊಬ್ಬರೂ ವ್ಯವಸ್ಥೆ ಜೊತೆಗೆ ಅನುಸರಣೆ ಮಾಡಿಕೊಂಡು ಹೋಗಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಕೆ ಎಸ್‌ ಆರ್ ಟಿ ಸಿ ಡಿಪೋ ವ್ಯವಸ್ಥಾಪಕ ಮಂಜುನಾಥ್ ಸೇರಿದಂತೆ ಹಲವಾರು ಪ್ರಯಾಣಿಕರು ಇದ್ದರು

100 ಕೋಟಿ ಸನಿಹಕ್ಕೆ ಶಕ್ತಿ ಯೋಜನೆ ಪ್ರಯಾಣಿಕರು

ಬೆಂಗಳೂರು(ನ.11):  ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆ ಅಡಿಯಲ್ಲಿ 92 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದು, ಪ್ರತಿದಿನದ ಪ್ರಯಾಣಿಕರ ಆಧಾರದಲ್ಲಿ ಈ ತಿಂಗಳ ಅಂತ್ಯದೊಳಗೆ ಆ ಸಂಖ್ಯೆ 100 ಕೋಟಿ ದಾಟುವ ಕುರಿತು ಸಾರಿಗೆ ನಿಗಮಗಳು ಅಂದಾಜಿಸಿವೆ.

ದಿನದಿಂದ ದಿನಕ್ಕೆ ಶಕ್ತಿ ಯೋಜನೆ ಅಡಿಯಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದೆ. ಪ್ರತಿದಿನ ಸರಾಸರಿ 60ರಿಂದ 65 ಲಕ್ಷ ಮಹಿಳೆಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ ಸಾಮಾನ್ಯ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡುತ್ತಿದ್ದಾರೆ. ಕಳೆದ ಜೂನ್‌ 11ರಂದು ಆರಂಭವಾದ ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೆ 92.75 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸಿದ್ದಾರೆ. ಪ್ರತಿದಿನದ ಪ್ರಯಾಣಿಕರನ್ನು ಗಮನಿಸಿದರೆ ಮುಂದಿನ 12ರಿಂದ 13 ದಿನಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ 100 ಕೋಟಿ ದಾಟುವ ಸಾಧ್ಯತೆಗಳಿವೆ. ಅಲ್ಲದೆ, ನ. 9ಕ್ಕೆ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರ ಉಚಿತ ಪ್ರಯಾಣದ ಟಿಕೆಟ್‌ ಮೌಲ್ಯ 2,200 ಕೋಟಿ ರು. ದಾಟಿದೆ.

ಶಕ್ತಿ ಯೋಜನೆ ಬೆನ್ನಲ್ಲೇ ಸಾರಿಗೆ ನೌಕರರಿಗೆ ಸಿಹಿಸುದ್ದಿ ಕೊಟ್ಟ ಕೆಎಸ್‌ಆರ್‌ಟಿಸಿ

ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವಿರೋಧ ಪಕ್ಷಗಳ ಟೀಕೆಯ ನಡುವೆ ಹಾಗೂ ಹಲವು ಸವಾಲುಗಳ ನಡುವೆ ಶಕ್ತಿ ಯೋಜನೆ ಯಶಸ್ವಿಗೊಂಡಿದೆ. ಶೀಘ್ರದಲ್ಲಿ 100 ಕೋಟಿ ಮಹಿಳೆಯರು ಉಚಿತ ಬಸ್‌ ಪ್ರಯಾಣದ ಸೇವೆ ಪಡೆಯುತ್ತಾರೆ. ಹೀಗಾಗಿ ನ. 17ರಂದು ವಿಶೇಷ ಕಾರ್ಯಕ್ರಮ ಆಯೋಜಿಸುವ ಚಿಂತನೆ ಮಾಡಲಾಗಿದೆ ಎಂದಿದ್ದಾರೆ.

Latest Videos
Follow Us:
Download App:
  • android
  • ios