ವಿಜಯಪುರ(ಡಿ.11): ಕೆರೆಯಲ್ಲಿ ಈಜಲು ಬಾರದೇ ಇಬ್ಬರು ಬಾಲಕರು ನೀರುಪಾಲಾದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ತಳೇವಾಡ ಗ್ರಾಮದಲ್ಲಿ ಘಟನೆ ಮಂಗಳವಾರ ನಡೆದಿದೆ. ಮೃತ ಬಾಲಕರನ್ನು ಸುದೀಪ(10) ಹಾಗೂ ಮಾಳಪ್ಪ(10) ಎಂದು ಗುರುತಿಸಲಾಗಿದೆ. 

ಇಬ್ಬರೂ ಬಾಲಕರು ಮಂಗಳವಾರ ಸಂಜೆ ಕೆರೆಯಲ್ಲಿ ಈಜಲು ಹೋದಾಗ ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಬಾಲಕರು ಬಾಲಕರು ಬುಧವಾರ ಬೆಳಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಸ್ಥಳದಲ್ಲಿ ಮೃತ ಕುಟುಂಬಸ್ಥರು ಆಕ್ರಂದನ ಮುಗಿಲುಮಟ್ಟಿದೆ. ಈ ಸಂಬಂಧ ಬಸವನಬಾಗೇವಾಡಿ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.