ಚಿಕ್ಕಬಳ್ಳಾಪುರ(ಜ.25):  ಬಾಲಕರಿಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತ ಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಗಲಮರಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. 

ಗ್ರಾಮದ ಚರಣ್‌(10) ಮತ್ತು ತೇಜು(11) ಮೃತಪಟ್ಟ ಬಾಲಕರು. ಇವರಿಬ್ಬರು ಗ್ರಾಮದ ಸಮೀಪ ಇರುವ ಕೃಷಿ ಹೊಂಡದ ಬಳಿ ತೆರಳಿದ್ದು ಆಕಸ್ಮಿಕವಾಗಿ ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದರು. ತಕ್ಷಣಲೇ ಮಕ್ಕಳನ್ನು ರಕ್ಷಿಸಿದ ಗ್ರಾಮಸ್ಥರು ಆಸ್ಪತ್ರೆಗೆ ಸಾಗಿಲು ಆ್ಯಂಬುಲೆನ್ಸ್‌ಗೆ ಕರೆ ಮಾಡಿದ್ದರು. ಆದರೆ ಎಷ್ಟು ಹೊತ್ತಾದರೂ ಆ್ಯಂಬುಲೆನ್ಸ್‌ ಸ್ಥಳಕ್ಕೆ ಬಂದಿರಲಿಲ್ಲ. ಆ್ಯಂಬುಲೆನ್ಸ್‌ ಸ್ಥಳಕ್ಕಾಗಮಿಸಿ ಚಿಂತಾಮಣಿ ಆಸ್ಪತ್ರೆಗೆ ಸಾಗಿಸುವ ಹೊತ್ತಿಗೆ ಬಾಲಕರಿಬ್ಬರು ಅಸುನೀಗಿರುವುದು ದೃಢಪಟ್ಟಿದೆ. 

ಕೋಳಿಮರಿಗಳನ್ನು ಕಾಡಿಗೆ ಬಿಟ್ಟ ರೈತರು, ತೆಗೆದುಕೊಳ್ಳಲು ಮುಗಿಬಿದ್ದ ಜನ!

ಇದರಿಂದ ರೊಚ್ಚಿಗೆದ್ದ ಯುವಕರ ಗುಂಪು ಸಾರ್ವಜನಿಕ ಆಸ್ಪತ್ರೆ ಮೇಲೆ ದಾಳಿ ನಡೆಸಿ ಕಿಟಕಿ ಗಾಜುಗಳನ್ನು ಪುಡಿಪುಡಿ ಮಾಡಿದ್ದಾರೆ. ಪೊಲೀಸರನ್ನು ಕಂಡು ಯುವಕರು ಗುಂಪು ಅಲ್ಲಿಂದ ಪರಾರಿಯಾಗಿದೆ.