ಕಲಬುರಗಿ(ಜೂ.25): ಜಿಲ್ಲೆಯಲ್ಲಿ ಕೊರೋನಾ ಹೆಮ್ಮಾರಿ ಅಬ್ಬರ ಹೆಚ್ಚಿದ್ದು ಬುಧವಾರ 22 ಮಂದಿಗೆ ಸೋಂಕು ತಗುಲಿದ್ದಲ್ಲದೆ ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. ಸಾವನ್ನಪ್ಪಿದ 78 ವರ್ಷದ ವೃದ್ಧ ಹಾಗೂ 55 ವರ್ಷದ ವ್ಯಕ್ತಿ ಇಬ್ಬರೂ ಕೆಮ್ಮು, ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. 

ಈ ಇಬ್ಬರ ಸಾವಿನಿಂದ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 22 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಆರು ಮಕ್ಕಳು, 8 ಮಹಿಳೆಯರು, 8 ಪುರುಷರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ ಆರು ಸೋಂಕಿತರ ಟ್ರಾವೆಲ್‌ ಹಿಸ್ಟರಿ ಇನ್ನೂ ಸಿಕ್ಕಿಲ್ಲ. 

ಕಲಬುರಗಿ: ಬಾಲಕಿ ಮೇಲೆ ರೇಪ್‌ ಮಾಡಿದ್ದ ಕಾಮುಕನ ಬಿಡದ ಕೊರೋನಾ..!

ಇಬ್ಬರು ಕಂಟೈನ್‌ಮೆಂಟ್‌ ಝೋನ್‌ನಲ್ಲಿದ್ದವರಾದರೆ, ಓರ್ವ ತೆಲಂಗಾಣದಿಂದ ವಾಪಸಾದ ವಲಸಿಗ ಹಾಗೂ ಉಳಿದವರು ಮಹಾರಾಷ್ಟ್ರದಿಂದ ವಾಪಸಾದ ವಲಸಿಗರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯ ಸೋಂಕಿತರ ಸಂಖ್ಯಾಬಲ 1254ಕ್ಕೆ ಏರಿದೆ. ಜಿಲ್ಲೆಯಲ್ಲಿ ಮತ್ತೆ 50 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ.