ಗದಗ(ಫೆ.18): ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. 

ತಾಲೂಕಿನ ಹುಲಕೋಟಿ ಹೊರವಲಯದಲ್ಲಿರುವ ಹುಲಕೋಟಿ ರೂರಲ್‌ ಎಂಜಿನಿಯರಿಂಗ್‌ ಕಾಲೇಜ್‌ ಬಳಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಪ್ರೇಮಾ ಈಶ್ವರಗೌಡ ಪಾಟೀಲ, ಕಾರು ಚಾಲಕ ಅನ್ವರ್‌ ಮೃತಪಟ್ಟಿದ್ದಾರೆ. ಈಶ್ವರಗೌಡ ಪಾಟೀಲ, ಶಿವಾಬಾಯಿ ಪಾಟೀಲ, ಮಹಾರಾಜ ಪಾಟೀಲ ಈ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಗದಗ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. 

ರಸ್ತೆ ಅಪಘಾತದಲ್ಲಿ ಸಾವನ್ನಪ್ಪುತ್ತಿರುವವರಲ್ಲಿ ಶೇ.70 ರಷ್ಟು ಯುವಜನಾಂಗ; ಬೆಚ್ಚಿ ಬೀಳಿಸುತ್ತಿದೆ ವರದಿ!

ಮೂಲತಃ ರೋಣ ತಾಲೂಕಿನ ಮಾಳವಾಡ ಗ್ರಾಮದವರಾದ ಇವರು ಧಾರವಾಡದಲ್ಲಿ ನೆಲೆಸಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.