ಮುಂಡರಿಗಿಯಿಂದ ಬೆಂಗಳೂರು ಕಡೆಗೆ ಕ್ವಿಡ್ ಕಾರಿನಲ್ಲಿ ಬರುವ ವೇಳೆ ಅಪಘಾತ ಸಂಭವಿಸಿದೆ. ಮುಂದೆ ನಿಂತಿದ್ದ ಸಿಮೆಂಟ್ ಬಲ್ಕರ್‌ಗೆ ಕ್ವಿಡ್ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. 

ತುಮಕೂರು(ನ.20): ಭೀಕರ ರಸ್ತೆ ಅಪಘಾತದಲ್ಲಿ ತಂದೆ‌, ಮಗ ಸ್ಥಳದಲ್ಲೇ ಸಾವನ್ನಪ್ಪಿ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಕಡಬಗೆರೆ ಬ್ರಿಡ್ಜ್ ಬಳಿ ಇಂದು(ಬುಧವಾರ) ನಡೆದಿದೆ. ಬೆಳಗ್ಗೆ 6.30ರ ಸುಮಾರಿನಲ್ಲಿ ಘಟನೆ ನಡೆದಿದೆ. 

ಗುರುರಾಜು(35), ಪುತ್ರ ರಿಷಾಂಕ್(2) ಮೃತ ದುರ್ದೈವಿಗಳು. ಪತ್ನಿ ಹರ್ಷಿತಾ(28) ಸ್ಥಿತಿ ಗಂಭೀರವಾಗಿದ್ದು ಶಿರಾ ಸಾರ್ವಜನಿಕ ಆಸ್ಪಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ. 

ಮಂಗಳೂರು: ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಮುಂಡರಿಗಿಯಿಂದ ಬೆಂಗಳೂರು ಕಡೆಗೆ ಕ್ವಿಡ್ ಕಾರಿನಲ್ಲಿ ಬರುವ ವೇಳೆ ಅಪಘಾತ ಸಂಭವಿಸಿದೆ. ಮುಂದೆ ನಿಂತಿದ್ದ ಸಿಮೆಂಟ್ ಬಲ್ಕರ್‌ಗೆ ಕ್ವಿಡ್ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.