ಕಲಬುರಗಿ: ರಸ್ತೆ ಅಪಘಾತ, ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆಂದು ಹೊರಟಿದ್ದ ಇಬ್ಬರು ಫ್ರೆಂಡ್ಸ್ ಸಾವು
ದುರಂತದಲ್ಲಿ ಮಡಿದವರನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿಗಳಾದ ಪ್ರಜ್ವಲ್, ಶಶಿಕುಮಾರ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಒಂದೇ ಬೈಕ್ ಮೇಲೆ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆಂದು ಹೊರಟಿದ್ದಾಗ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ಕಲಬುರಗಿ(ಡಿ.03): ಬಸ್ ಹಾಗೂ ಬೈಕ್ ಮಧ್ಯೆ ಸಂಭವಿಸಿರುವ ಡಿಕ್ಕಿಯಲ್ಲಿ ಇಬ್ಬರು ಸ್ನೇಹಿತರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಜಿಲ್ಲೆಯ ಜೇವರ್ಗಿ ಹೆದ್ದಾರಿಯಲ್ಲಿ ಬರುವ ಕಟ್ಟಿ ಸಂಗಾವಿ ಗ್ರಾಮದ ಬಳಿ ಸಂಭವಿಸಿದೆ.
ದುರಂತದಲ್ಲಿ ಮಡಿದವರನ್ನು ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದ ನಿವಾಸಿಗಳಾದ ಪ್ರಜ್ವಲ್ (22), ಶಶಿಕುಮಾರ್ (21) ಎಂದು ಗುರುತಿಸಲಾಗಿದೆ. ಇವರಿಬ್ಬರೂ ಒಂದೇ ಬೈಕ್ ಮೇಲೆ ಸ್ನೇಹಿತನ ಹುಟ್ಟುಹಬ್ಬದ ಪಾರ್ಟಿಗೆಂದು ಹೊರಟಿದ್ದಾಗ ದುರಂತದಲ್ಲಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನೈಸ್ ರಸ್ತೆಯಲ್ಲಿ ಬೈಕ್‌ಗೆ ಗುದ್ದಿದ ಗೂಡ್ಸ್ ವಾಹನ: ದಂಪತಿ ಸ್ಥಳದಲ್ಲಿಯೇ ಸಾವು
ಡಿಕ್ಕಿ ರಭಸಕ್ಕೆ ಬೈಕ್ ನುಜ್ಜುಗುಜ್ಜಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಬೈಕ್ ಸವಾರರು ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೇವರ್ಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.