ರಾಯಚೂರು - ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಕೆಲಸಕ್ಕೆ ಹೋಗುವ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.  

ರಾಯಚೂರು(ಅ.13): ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ನಗರದ ಹೊರವಲಯದ ವೈಟಿಪಿಎಸ್ ವಿದ್ಯುತ್ ಕೇಂದ್ರದ ಬಳಿ ಇಂದು(ಭಾನುವಾರ) ನಡೆದಿದೆ. ಜನಾರ್ದನ (27) ಮೃತ ಬೈಕ್ ಸವಾರ, ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಯಚೂರು - ಹೈದ್ರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಖಾಸಗಿ ಕಂಪನಿಯ ಉದ್ಯೋಗಿ ಕೆಲಸಕ್ಕೆ ಹೋಗುವ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಲಾರಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ನಡೆದಿದೆ ಎಂದು ತಿಳಿದು ಬಂದಿದೆ. ತಲೆಗೆ ಬಲವಾದ ಪೆಟ್ಟು ಬಿದ್ದು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ರಾಯಚೂರು: ತಾತನಿಗೆ ಬನ್ನಿ ಕೊಟ್ಟು ವಾಪಸ್‌ ಬರೋ ವೇಳೆ ಸ್ಕೂಟರ್‌ಗೆ ಕಾರ್ ಡಿಕ್ಕಿ, ಓರ್ವ ಯುವತಿ ಸಾ

ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರು ತೆಲಂಗಾಣ ಮೂಲದವರು ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.