ಬೈಪಾಸ್ ರಸ್ತೆಯ ಧಾರಾವತಿ ಹನುಮಂತ ದೇವಸ್ಥಾನ ಬಳಿ ಘಟನೆ ನಡೆದಿದೆ. ಬೈಕ್‌ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರ ದಂಪತಿಗಳು ಸಾವನ್ನಪ್ಪಿದ್ದಾರೆ. 

ಹುಬ್ಬಳ್ಳಿ(ಅ.20): ಸಾವಿನ ಹೆದ್ದಾರಿ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯಲ್ಲಿ ಮತ್ತೆರಡು ಜೀವಗಳು ಬಲಿಯಾಗಿವೆ. ಹೌದು, ಬೈಕ್‌ಗೆ ಟವೇರಾ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಧಾರವಾಡ ಬೈಪಾಸ್ ರಸ್ತೆಯಲ್ಲಿ ನಡೆದಿದೆ. 

ಬೈಪಾಸ್ ರಸ್ತೆಯ ಧಾರಾವತಿ ಹನುಮಂತ ದೇವಸ್ಥಾನ ಬಳಿ ಘಟನೆ ನಡೆದಿದೆ. ಬೈಕ್‌ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರ ದಂಪತಿಗಳು ಸಾವನ್ನಪ್ಪಿದ್ದಾರೆ. 

ಪೊಲೀಸರು ಮೃತರ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ. ಈ ಸಂಬಂಧ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.